ETV Bharat / bharat

ಲಷ್ಕರ್​ ಎ ತೋಯ್ಬಾ ಸಂಘಟನೆ ಸಹಚರನ ಬಂಧನ

ಪೊಲೀಸ್​ ಸಿಬ್ಬಂದಿ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್​ ಎ ತೋಯ್ಬಾ ಉಗ್ರ ಸಂಘಟನೆಯ ಸಹಚರನನ್ನು ಶಸ್ತ್ರಾಸ್ತ್ರಗಳೊಂದಿಗೆ ಸೆರೆ ಹಿಡಿದಿದ್ದಾರೆ.

militant-associate-of-let-outfit-arrested-along-with-arms-ammunition-in-baramulla
ಲಷ್ಕರ್​ ಎ ತೋಯ್ಬಾ ಸಂಘಟನೆಯ ಸಹಚರನ ಬಂಧನ
author img

By

Published : Jul 5, 2023, 7:39 PM IST

ಬಾರಾಮುಲ್ಲಾ( ಜಮ್ಮು ಮತ್ತು ಕಾಶ್ಮೀರ): ಲಷ್ಕರ್​ ಎ ತೋಯ್ಬಾ ಉಗ್ರ ಸಂಘಟನೆಯ ಸಹಚರನನ್ನು ಶಸ್ತ್ರಾಸ್ತ್ರಗಳೊಂದಿಗೆ ಸೆರೆ ಹಿಡಿಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತನನ್ನು ನೌಪೋರಾ ಜಾಗೀರ್​ ಕ್ರೀರ್​ ಗ್ರಾಮದ ನಿವಾಸಿ ಮೊಹಮ್ಮದ್​ ಸಿದ್ದಿಕ್ ಎಂದು ಗುರುತಿಸಲಾಗಿದೆ. ಬಂಧಿತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ​ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಲ್ಲಿನ ನೌಪೋರಾ ಜಾಗೀರ್​ ಕ್ರೀರ್​ ಗ್ರಾಮದಲ್ಲಿ ಉಗ್ರರ ಚಲವಲನ ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್​ ಸಿಬ್ಬಂದಿ ಗ್ರಾಮದಲ್ಲಿ ಜಂಟಿ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಈ ವೇಳೆ ಉಗ್ರ ಸಂಘಟನೆಯ ಸಹಚರನೊಬ್ಬ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಸೇನಾಪಡೆ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಒಂದು ಪಿಸ್ತೂಲ್​ ಮತ್ತು ಮೂರು ಜೀವಂತ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯು ಲಷ್ಕರ್​ ಎ ತೋಯ್ಬಾ ಉಗ್ರ ಸಂಘಟನೆಯ ಸಹವರ್ತಿಯಾಗಿ ಕೆಲಸ ಮಾಡುತ್ತಿದ್ದನು. ಆರೋಪಿಯು ಸೋಪೋರ್​ನ ಉಗ್ರಗಾಮಿ ಆದಿಲ್​ ದಾಂಟೂ ಮತ್ತು ಪಾಕಿಸ್ತಾನದ ಉಗ್ರಗಾಮಿ ಉಸ್ಮಾನ್​ ಭಾಯ್​ಗಾಗಿ ಕೆಲಸ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಜಿಲ್ಲೆಯಲ್ಲಿ ಉಗ್ರ ಕೃತ್ಯಗಳನ್ನು ಎಸಗಲು ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ : ಕಳೆದ ಕೆಲವು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು ದಾಟಲು ಯತ್ನಿಸುತ್ತಿದ್ದ ಭಯೋತ್ಪಾದಕರ ಮೇಲೆ ಭಾರತೀಯ ಸೇನಾ ಪಡೆ ಗುಂಡಿನ ದಾಳಿ ನಡೆಸಿತ್ತು. ಈ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರಿಗೆ ಗಾಯವಾಗಿತ್ತು.

ಜಿಲ್ಲೆಯ ಗುಲ್ಪುರ್ ಸೆಕ್ಟರ್‌ನ ಎಲ್‌ಒಸಿ ಬಳಿ ಕಣಿವೆಯೊಳಗೆ ಮೂವರು ಶಸ್ತ್ರಸಜ್ಜಿತ ಉಗ್ರರು ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿತ್ತು. ಉಗ್ರರು ದಟ್ಟವಾದ ಎಲೆಗಳು ಮತ್ತು ಕಪ್ಪು ಹೊದಿಕೆಯಲ್ಲಿ ಗಡಿಯೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

ಉಗ್ರರು ಒಳನುಸುಳುವುದನ್ನು ಗಮನಿಸಿದ್ದ ಯೋಧರು, ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಉಗ್ರರೂ ದಾಳಿ ನಡೆಸಿದ್ದರು. ಚಕಮಕಿಯಲ್ಲಿ ಓರ್ವ ಭಾರತೀಯ ಯೋಧನಿಗೆ ಬುಲೆಟ್ ತಾಕಿ ಗಾಯಗೊಂಡಿದ್ದರು. ಬಳಿಕ ಭಯೋತ್ಪಾದಕರು ಸಮೀಪದ ದಟ್ಟ ಅರಣ್ಯದೊಳಗೆ ನುಸುಳಿ ತಪ್ಪಿಸಿಕೊಂಡಿದ್ದರು. ಈ ಸಂಬಂಧ ಉಗ್ರರನ್ನು ಹೆಡೆಮುರಿಕಟ್ಟಲು ಶೋಧ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದರು.ಇದಕ್ಕೂ ಮುನ್ನ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ನುಸುಳಲು ಯತ್ನಿಸುತ್ತಿದ್ದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

ಇದನ್ನೂ ಓದಿ : Militants infiltrate: ಗಡಿ ದಾಟಲು ಯತ್ನಿಸಿದ ಉಗ್ರರ ಮೇಲೆ ದಾಳಿ, ಚಕಮಕಿಯಲ್ಲಿ ಯೋಧನಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.