ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಕ್ರೀವ್ ಪಾಂಪೋರ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ನಿನ್ನೆ ಸಂಜೆ ಉಗ್ರರು ಶ್ರೀನಗರದ ಸರಾಫ್ ಕಡಲ್ನಲ್ಲಿ ಪೊಲೀಸ್ ಮತ್ತು ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಪೊಲೀಸರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದರು.