ETV Bharat / bharat

ಜಮ್ಮು ಕಾಶ್ಮೀರ : ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ - ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉತ್ತರಕಾಶ್ಮೀರದ ಬಂಡಿಪೋರಾದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ..

Militant killed in ongoing J&K encounter: police
ಜಮ್ಮು ಕಾಶ್ಮೀರ: ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
author img

By

Published : May 13, 2022, 7:16 PM IST

ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಬ್ರಾರ್ ಅರಗಮ್ ಪ್ರದೇಶದಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಅಪರಿಚಿತ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಬಂಡಿಪೋರಾ ಎನ್‌ಕೌಂಟರ್ ಅಪ್‌ಡೇಟ್: ಓರ್ವ ಭಯೋತ್ಪಾದಕನ ಹತ್ಯೆಯಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು' ಎಂದು ಕಾಶ್ಮೀರ ಪೊಲೀಸ್ ವಕ್ತಾರರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ನಂತರ ವಕ್ತಾರರು ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಅಪರಿಚಿತ ಉಗ್ರನನ್ನು ಕೊಲ್ಲಲಾಯಿತು ಎಂದು ಹೇಳಿದರು.

ಕಾಶ್ಮೀರದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಕಾರ, '11/5/22ರಂದು ಸಲಿಂದರ್ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಿಂದ ತಪ್ಪಿಸಿಕೊಂಡ ಎಲ್ಇಟಿ ಭಯೋತ್ಪಾದಕ ಸಂಘಟನೆಯ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಇತ್ತೀಚೆಗೆ ನುಸುಳಿದ್ದಾರೆ ಮತ್ತು ಇಂದು ಬ್ರಾರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ'.

ಇದನ್ನೂ ಓದಿ: ಯಾತ್ರಾರ್ಥಿಗಳ ಹೊತ್ತೊಯ್ಯುತ್ತಿದ್ದ ಬಸ್​​ಗೆ ದಿಢೀರ್ ಬೆಂಕಿ.. ಇಬ್ಬರು ಸಜೀವ ದಹನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.