ಬಾರಾಮುಲ್ಲಾ(ಜಮ್ಮು-ಕಾಶ್ಮೀರ): ಕಣಿವೆ ನಾಡಿನಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಬಾರಾಮುಲ್ಲಾದಲ್ಲಿನ ವೈನ್ ಶಾಪ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸದಾಗಿ ನಿರ್ಮಾಣ ಮಾಡಲಾಗಿದ್ದ ವೈನ್ ಶಾಪ್ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಇಂದು ಸಂಜೆ ಈ ಘಟನೆ ನಡೆದಿದೆ. ಅಧಿಕಾರಿಗಳು ತಿಳಿಸಿರುವ ಮಾಹಿತಿ ಪ್ರಕಾರ, ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾಗಿ ತಿಳಿಸಿದ್ದಾರೆ. ಇವರನ್ನ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದರು.
ಘಟನೆಯಲ್ಲಿ ಗಾಯಗೊಂಡವರನ್ನ ರವಿ ಕುಮಾರ್(36), ಕಾಂತೂ, ಗೋವಿಂದ್ ಸಿಂಗ್ ಹಾಗೂ ಗೋವಿಂದ್ರ ಸಿಂಗ್(35) ಎಂದು ಗುರುತಿಸಲಾಗಿದೆ.