ಚಂಡೀಗಢ (ಹರಿಯಾಣ): ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 'ಫ್ಲೈಯಿಂಗ್ ಸಿಖ್' ಮಿಲ್ಖಾ ಸಿಂಗ್ ಶುಕ್ರವಾರ ರಾತ್ರಿ 11.30ಕ್ಕೆ ಇಹಲೋಕ ತ್ಯಜಿಸಿದ್ದು, ಇಂದು ಸಂಜೆ 5 ಗಂಟೆಗೆ ಚಂಡೀಗಢದ ಸೆಕ್ಟರ್-25ರಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಸುಮಾರು ಒಂದು ತಿಂಗಳ ಹಿಂದೆ ಮಿಲ್ಖಾ ಸಿಂಗ್ಗೆ ಕೊರೊನಾ ಕಾಣಿಸಿಕೊಂಡಿದ್ದು, ಕೆಲವೇ ದಿನಗಳ ಹಿಂದೆ ಸೋಂಕು ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯ ವಿಷಮಿಸಿದ್ದು, ಚಂಡೀಗಢದ ಪಿಜಿಐ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಜೀವನದ ಓಟ ನಿಲ್ಲಿಸಿದ ಭಾರತದ 'ಫ್ಲೈಯಿಂಗ್ ಸಿಖ್' ಖ್ಯಾತಿಯ ಮಿಲ್ಖಾ ಸಿಂಗ್!
ಮಿಲ್ಖಾ ಸಿಂಗ್ 1958ರಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ 200 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ಚಿನ್ನ, 1958ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದು ಸ್ವಾತಂತ್ರ್ಯ ನಂತರ ಭಾರತಕ್ಕೆ ಕಾಮನ್ವೆಲ್ತ್ನಲ್ಲಿ ಬಂದ ಮೊಟ್ಟ ಮೊದಲ ಸ್ವರ್ಣ ಪದಕವಾಗಿತ್ತು. ಇವರ ಸಾಧನೆಗೆ ಭಾರತ ಸರ್ಕಾರ ಪದ್ಮಶ್ರೀ ಗೌರವ ನೀಡಿದೆ.