ETV Bharat / bharat

ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ಕೇಂದ್ರ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್ - Nirmala Sitharaman saree news

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಧಾರವಾಡದ ಸೀರೆಯುಟ್ಟು ಸಂಸತ್ತಿಗೆ ಆಗಮಿಸಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್
ಸಚಿವೆ ನಿರ್ಮಲಾ ಸೀತಾರಾಮನ್
author img

By

Published : Feb 1, 2023, 12:55 PM IST

Updated : Feb 1, 2023, 3:31 PM IST

ಧಾರವಾಡ ಕಸೂತಿ ಕಲೆಯಿರುವ ಸೀರೆ ವಿಶೇಷತೆ

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಇಳಕಲ್​ ಸೀರೆಯುಟ್ಟು ಸಂಸತ್ತಿಗೆ ಬಂದಿದ್ದು ವಿಶೇಷವಾಗಿತ್ತು.

ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳೆಯರು ಅನ್ನುವುದು ಇನ್ನೂ ವಿಶೇಷ. ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಲ್ಹಾದ್​ ಜೋಶಿ ಅವರು ನವಲಗುಂದ ಕಸೂತಿ ಕಲೆ ಬಗ್ಗೆ, ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮ ಒಂದರಲ್ಲಿ ವಿವರಿಸಿ, ಈ ಸೀರೆಗಳನ್ನು ಜಿಲ್ಲೆಯಿಂದ ಉಡುಗೊರೆಯಾಗಿ ನೀಡಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ್ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆ ತಯಾರಿಗೆ ಸೂಚಿಸಿದ್ದರು.

ಆರತಿ ಕ್ರಾಪ್ಟ್ಸ್: ಆರತಿ ಕ್ರಾಪ್ಟ್ಸ್ ಮಾಲೀಕರಾದ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಆರತಿ ಅವರು, ಸುಮಾರು 210 ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ. ಗ್ರಾಹಕರಿಂದ ಕಸೂತಿ ಸೀರೆ, ಶಲ್ಯೆ, ಉಡುಗೆಗಳ ಬೇಡಿಕೆ ಪಡೆಯುವ ಆರತಿ ಹಿರೇಮಠ ಅವರು ತಮ್ಮ ಮಹಿಳಾ ಸಿಬ್ಬಂದಿ ಮನೆಗೆ ತೆರಳಿ, ಪರಿಕರ ಪೂರೈಸುತ್ತಾರೆ ಮತ್ತು ಸಿದ್ಧವಾದ ಬಟ್ಟೆಗಳನ್ನು ತಾವೇ ಸಂಗ್ರಹ ಮಾಡುತ್ತಾರೆ.

ಕೇಂದ್ರ ಹಣಕಾಸು ಸಚಿವರಿಗೆ ಕಳುಹಿಸಿದ್ದ ಸೀರೆಗಳ ವಿಶೇಷತೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಅವರ ಆಸಕ್ತಿಯ ಬೇಡಿಕೆಯಂತೆ ಸೀರೆಗಳನ್ನು ಕಳುಹಿಸಲಾಗಿದೆ. ಅದರಲ್ಲಿ ಇಂದು ಅವರು ತೊಟ್ಟಿರುವ ಕೆಂಪು (ಮರೂನ್) ಬಣ್ಣದ ಸೀರೆ ಕೂಡ ಸೇರಿದೆ.

ಧಾರವಾಡ ಕಸೂತಿ ಸೀರೆ ವಿಶೇಷತೆ: ಕೈಮಗ್ಗದಲ್ಲಿ ನೇಯ್ದ ಇಳಕಲ್ಲ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದುವರೆ ಮೀಟರ್ ಉದ್ದದ ಇಳಕಲ್ಲ ಸೀರೆಗೆ ಬಾರ್ಡರ್​ ಇದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ. ಕೈಮಗ್ಗ ಉದ್ಯಮಕ್ಕೆ ಪ್ರೋತ್ಸಾಹಿಸುವ ಮತ್ತು ಸ್ವಯಂ ಉದ್ಯೋಗನಿರತ ಮಹಿಳೆಯರನ್ನು ಬೆನ್ನು ತಟ್ಟುವ ಕೇಂದ್ರ ಸಚಿವರ ಈ ಕ್ರಮ ನಮಗೆ ಸಂತಸ ಮತ್ತು ಹೆಮ್ಮೆ ಮೂಡಿಸಿದೆ.

ಇದನ್ನೂ ಓದಿ: ಭಾರತ ವಿಶ್ವದಲ್ಲೇ ಅತ್ಯುನ್ನತ ಆರ್ಥಿಕ ಪರಿಸ್ಥಿತಿ ಹೊಂದಿದೆ: ನಿರ್ಮಲಾ ಸೀತಾರಾಮನ್​

ಕೇಂದ್ರ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇಡೀ ದೇಶ, ಜಗತ್ತು ಅವರತ್ತ ದೃಷ್ಟಿ ನೆಟ್ಟಿರುತ್ತದೆ. ಅವರು ನಮ್ಮೂರಿನ ಸೀರೆಯುಟ್ಟು ಬಲಿಷ್ಠ ಭಾರತ ದೇಶದ ಬಜೆಟ್ ಮಂಡಿಸುತ್ತಿರುವುದು ನಮ್ಮ ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದೆ. ಮತ್ತು ಕಸೂತಿ ಅಂತಹ ಗ್ರಾಮೀಣ ಕಲೆಗಳಿಗೆ, ಮಹಿಳೆಯರಿಗೆ ಈ ಮೂಲಕ ಬೆಂಬಲಿಸಿ, ಪ್ರೋತ್ಸಾಹ ನೀಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಸೂತಿ ಕಲೆ ತಜ್ಞೆ ಆರತಿ ಹಿರೇಮಠ ಕೃತಜ್ಞತೆ ಸಲ್ಲಿಸಿದ್ದಾರೆ.

Last Updated : Feb 1, 2023, 3:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.