ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
-
Have tested Covid positive.
— Dr. S. Jaishankar (@DrSJaishankar) January 27, 2022 " class="align-text-top noRightClick twitterSection" data="
Urge all those who have come in recent contact to take suitable precautions.
">Have tested Covid positive.
— Dr. S. Jaishankar (@DrSJaishankar) January 27, 2022
Urge all those who have come in recent contact to take suitable precautions.Have tested Covid positive.
— Dr. S. Jaishankar (@DrSJaishankar) January 27, 2022
Urge all those who have come in recent contact to take suitable precautions.
ನನಗೆ ಕೋವಿಡ್ ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಕ್ಷಣವೇ ಪರೀಕ್ಷೆ ಮಾಡಿಸಿಕೊಂಡು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕೋವಿಡ್ ಪರೀಕ್ಷೆಗೊಳಪಡುವುದಕ್ಕೂ ಮುಂಚಿತವಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ಫ್ರೆಂಚ್ ರಾಯಭಾರಿ ಜೊತೆ ಮಾತುಕತೆ ನಡೆಸಿದ್ದರು.
ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆಯಿಂದ 'ಭಾರತದ ಭವಿಷ್ಯ ನಿರ್ಧಾರ': ಅಮಿತ್ ಶಾ
ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 2,86,384 ಹೊಸ ಪ್ರಕರಣ ದಾಖಲಾಗಿದ್ದು, 573 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಮುಖ್ಯವಾಗಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.
ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಗೊಂಡಿತ್ತು. ಮನೆಯಲ್ಲೇ ಕ್ವಾರಂಟೈನ್ಗೊಳಗಾಗಿದ್ದ ಅವರು, ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ