ನವದೆಹಲಿ: ಬ್ಯಾಂಕಿಂಗ್ ಸಿಬ್ಬಂದಿ ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸುವ ಕುರಿತು ಸಮಿತಿ ರಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.
-
ಅದರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವದಾಗಿ ಭರೆವಸೆ ನೀಡಿದ್ದು, ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವದು. ವಿತ್ತ ಸಚಿವರಿಗೆ ಧನ್ಯವಾದಗಳು.
— Pralhad Joshi (@JoshiPralhad) July 13, 2021 " class="align-text-top noRightClick twitterSection" data="
ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ.
">ಅದರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವದಾಗಿ ಭರೆವಸೆ ನೀಡಿದ್ದು, ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವದು. ವಿತ್ತ ಸಚಿವರಿಗೆ ಧನ್ಯವಾದಗಳು.
— Pralhad Joshi (@JoshiPralhad) July 13, 2021
ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ.ಅದರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವದಾಗಿ ಭರೆವಸೆ ನೀಡಿದ್ದು, ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವದು. ವಿತ್ತ ಸಚಿವರಿಗೆ ಧನ್ಯವಾದಗಳು.
— Pralhad Joshi (@JoshiPralhad) July 13, 2021
ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ.
ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಗಳನ್ನು (IBPS) ಸ್ಥಳೀಯ ಭಾಷೆಗಳಲ್ಲಿಯೇ ನಡೆಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಚಿವರು ಸ್ಥಳಿಯ ಭಾಷೆಗಳಲ್ಲಿಯೇ ಪರೀಕ್ಷೆಗಳನ್ನು ನಡೆಸುವ ದೃಷ್ಟಿಯಿಂದ ಒಂದು ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ. ಅದರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರೆವಸೆ ನೀಡಿದ್ದು, ಅಲ್ಲಿಯವರೆಗೆ ಆಯ್ಕೆ ಪರೀಕ್ಷೆಯನ್ನು ತಡೆ ಹಿಡಿಯಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ನಡೆಸದೇ ಕೇಂದ್ರ ಸರ್ಕಾರದಿಂದ ಕನ್ನಡಿಗರಿಗೆ ದ್ರೋಹ: ಸಿದ್ದರಾಮಯ್ಯ
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿ, ಈಗಾಗಲೇ ಗ್ರಾಮೀಣ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲಾಗುತ್ತಿದೆ ಎಂದಿದ್ದಾರೆ. ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ಇಲ್ಲದಿರುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಆಕ್ಷೇಪ ವ್ಯಕ್ತಪಡಿಸುತ್ತು.ಇದರ ಜೊತೆಗೆ ಪ್ರತಿಪಕ್ಷಗಳು ಸಹ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದ್ದವು. ಇದರ ಪರಿಣಾಮ ರಾಜ್ಯ ಸರ್ಕಾರದ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವ ಕುರಿತು ಮಾತುಕತೆ ನಡೆಸಿದ್ದಾರೆ.