ETV Bharat / bharat

ದೆಹಲಿ ಏರ್​ಪೋರ್ಟ್​ಗೆ ಸಿಂಧಿಯಾ ಹಠಾತ್ ಭೇಟಿ: T3ಯಲ್ಲಿ ಜನದಟ್ಟಣೆ ತಗ್ಗಿಸಲು ಸೂಚನೆ - T3ಯಲ್ಲಿ ಜನದಟ್ಟಣೆ ತಗ್ಗಿಸಲು ಸೂಚನೆ

ವಿಮಾನ ನಿಲ್ದಾಣದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರ ದೂರು ಹೆಚ್ಚಾಗುತ್ತಿರುವ ಮಧ್ಯೆ ಸಿಂಧಿಯಾ ಭಾನುವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಸ್ -3ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ದೆಹಲಿ ಏರ್​ಪೋರ್ಟ್​ಗೆ ಸಚಿವ ಸಿಂಧಿಯಾ ಹಠಾತ್ ಭೇಟಿ: T3ಯಲ್ಲಿ ಜನದಟ್ಟಣೆ ತಗ್ಗಿಸಲು ಸೂಚನೆ
Minister Scindia surprise visit to Delhi Airport Instructions to decongest T3
author img

By

Published : Dec 12, 2022, 4:58 PM IST

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​-3ಗೆ ಹಠಾತ್ ಭೇಟಿ ನೀಡಿದ್ದರು. ಭೇಟಿಯ ನಂತರ ಸಂಬಂಧಿಸಿದ ಪಾಲುದಾರರೊಂದಿಗೆ ಅವರು ಪರಿಶೀಲನಾ ಸಭೆ ನಡೆಸಿದ್ದು, ಸಭೆಯ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಮಾನ ಪ್ರಯಾಣಿಕರ ಪ್ರಯಾಣವನ್ನು ಸುಲಭವಾಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಮುಖ ಟರ್ಮಿನಸ್‌ನಲ್ಲಿ ಜನದಟ್ಟಣೆ ಉಂಟಾಗುತ್ತಿರುವ ಬಗ್ಗೆ ವಿಮಾನ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ದೂರುತ್ತಿರುವ ಹಿನ್ನೆಲೆಯಲ್ಲಿ ಅವರ ಭೇಟಿ ಮತ್ತು ಹೇಳಿಕೆ ಮಹತ್ವ ಪಡೆದಿವೆ.

ಇಂದು ನಾವು ಪ್ರವೇಶ ದ್ವಾರಗಳ ಸಂಖ್ಯೆಯನ್ನು 14 ರಿಂದ 16 ಕ್ಕೆ ಹೆಚ್ಚಿಸಿದ್ದೇವೆ. ವಿಮಾನ ನಿಲ್ದಾಣದ ಒಳಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಅಲ್ಲಿ ಪ್ರವೇಶದ ಮೊದಲು ಪ್ರತಿ ಪ್ರವೇಶ ಗೇಟ್‌ನಲ್ಲಿ ವೇಟಿಂಗ್ ಟೈಮ್ ಅನ್ನು ಪ್ರದರ್ಶಿಸುವ ಸೈನ್‌ಬೋರ್ಡ್ ಇರಿಸಬೇಕೆಂದು ನಿರ್ಧರಿಸಿದ್ದೇವೆ. ಯಾವ ಗೇಟ್​ನಲ್ಲಿ ಅತಿ ಕಡಿಮೆ ವೇಟಿಂಗ್ ಟೈಮ್ ಇದೆ ಎಂಬುದನ್ನು ತಿಳಿಯಲು ಪ್ರಯಾಣಿಕರಿಗೆ ಇದರಿಂದ ಸಹಾಯಕವಾಗಲಿದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು.

ವಿಮಾನನಿಲ್ದಾಣದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರ ದೂರು ಹೆಚ್ಚಾಗುತ್ತಿರುವ ಮಧ್ಯೆ ಸಿಂಧಿಯಾ ಭಾನುವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಸ್ -3ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸದ್ಯ ವಿಮಾನನಿಲ್ದಾಣದಲ್ಲಿ 13 ಲೈನ್​ಗಳಿದ್ದು ಅವನ್ನು 16ಕ್ಕೆ ಏರಿಸಲಾಗಿದೆ. ಇವನ್ನು ಇನ್ನೂ ಹೆಚ್ಚಿಸಿ 20 ಲೈನ್ ಮಾಡುವ ಚಿಂತನೆಯಿದೆ ಎಂದು ಅವರು ತಿಳಿಸಿದರು.

ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ದಟ್ಟಣೆ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಸಚಿವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಮಸ್ಯಾತ್ಮಕ ಪ್ರದೇಶಗಳನ್ನು ವೀಕ್ಷಿಸಿದ ಸಮಯದಲ್ಲಿ ನಿಲ್ದಾಣದ ಅಧಿಕಾರಿಗಳು ಮತ್ತು ಸಿಐಎಸ್‌ಎಫ್‌ಗೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರು.

ಡಿಸೆಂಬರ್ 7 ರಂದು ಸಿಂಧಿಯಾ ವಿಮಾನ ನಿಲ್ದಾಣದ ದಟ್ಟಣೆಯ ದೂರುಗಳ ಬಗ್ಗೆ ಅಧಿಕಾರಿಗಳನ್ನು ಭೇಟಿ ಮಾಡಿದ್ದರು ಮತ್ತು ಸಮಸ್ಯೆಯನ್ನು ಬಗೆಹರಿಸುವ ಕ್ರಮಗಳ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಏರ್‌ಪೋರ್ಟ್‌ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.