ETV Bharat / bharat

ಪ.ಬಂಗಾಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸಾವು: ಟಿಎಂಸಿ ಮುಖಂಡನ ಪುತ್ರ ಅರೆಸ್ಟ್‌ - ಬಂಗಾಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಹುಟ್ಟುಹಬ್ಬದ ಸಂತೋಷ ಕೂಟದಲ್ಲಿ ಭಾಗಿಯಾಗಿದ್ದ ವೇಳೆ 9ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದ್ದು, ಆಕೆ ಸಾವನ್ನಪ್ಪಿದ್ದಾಳೆ.

Minor gir dies after gang rape in west bengal

author img

By

Published : Apr 11, 2022, 4:44 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಬಾಲಕಿ ಸಾವನ್ನಪ್ಪಿದ್ದಾಳೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಟಿಎಂಸಿ ನಾಯಕನ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಶವಪರೀಕ್ಷೆ ನಡೆಸದೇ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂತ್ರಸ್ತೆಯ ತಂದೆ, 'ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿ ವಾಪಸ್​ ಆದ ಮಗಳ ದೇಹದಲ್ಲಿ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಹೊಟ್ಟೆನೋವಿನಿಂದಲೂ ಬಳಲುತ್ತಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಆಕೆ ಸಾವನ್ನಪ್ಪಿದ್ದಾಳೆ' ಎಂದು ತಿಳಿಸಿದ್ದಾರೆ. ಕೃತ್ಯದಲ್ಲಿ ತೃಣಮೂಲ ಕಾಂಗ್ರೆಸ್​ ಪಕ್ಷದ ಮುಖಂಡನ ಮಗನ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ಆತ ಒತ್ತಡ ಹಾಕಿದ್ದಕ್ಕಾಗಿ ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಹೇಳಲಾಗಿದೆ.

ನಾಡಿಯ ಜಿಲ್ಲೆಯ ಹಂಸಖಾಲಿ ಎಂಬಲ್ಲಿ ಕಳೆದ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಮೃತ ಬಾಲಕಿಗೆ ನ್ಯಾಯ ಒದಗಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿದ್ದು, ರಾಣಾಘಾಟ್​ನಲ್ಲಿ 12 ಗಂಟೆಗಳ ಕಾಲ ಬಂದ್​ಗೆ ಕರೆ ನೀಡಿದೆ.

ಇದನ್ನೂ ಓದಿ: ಡ್ರಗ್ಸ್​​ ಖರೀದಿಸಲು ಹಣ ನೀಡದ ತಾಯಿ; ಸಿಲಿಂಡರ್​ ಸ್ಫೋಟಿಸಿ, ಮನೆಗೆ ಬೆಂಕಿ ಹಚ್ಚಿದ ಪುತ್ರ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.