ETV Bharat / bharat

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಜೀವಂತ ಸುಟ್ಟ ದುಷ್ಕರ್ಮಿಗಳು! - ಬಿಹಾರದಲ್ಲಿ ರೇಪ್​, ಜೀವಂತ ಸುಟ್ಟು ಹಾಕಿದ ದುಷ್ಕರ್ಮಿಗಳು

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಕಾಮುಕರ ಗುಂಪು ಆಕೆಯನ್ನ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ನಡೆದಿದೆ.

Girl rape in Bihar
Girl rape in Bihar
author img

By

Published : Jan 13, 2021, 5:18 PM IST

ಮುಜಾಫರ್​ಪುರ್​(ಬಿಹಾರ): ಬಿಹಾರದ ಮುಜಾಫರ್​ಪುರ್​ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಾಮುಕರು ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ.

ಜನವರಿ 3ರಂದು ಬಿಹಾರದ ಮುಜಾಫರ್​​ಪುರ್​ದಲ್ಲಿ ಈ ದುರ್ಘಟನೆ ನಡೆದಿದ್ದು, ಆರೋಪಿಗಳಿಗೆ ಹೆದರಿ ಸಂತ್ರಸ್ತೆ ಕುಟುಂಬಸ್ಥರು ಪ್ರಕರಣ ದಾಖಲು ಮಾಡಿಲ್ಲ ಎಂದು ವರದಿಯಾಗಿದೆ.

ಓದಿ: ಅಮ್ಮನ ಸಾವಿನಿಂದ 3 ವರ್ಷ ಕೊರಗಿದ ಮಗ: ದುಃಖ ತಾಳಲಾರದೇ ನೇಣಿಗೆ ಶರಣು

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ತಂದೆ ಮಾಹಿತಿ ನೀಡಿದ್ದು, ಕೃತ್ಯದಲ್ಲಿ ನಾಲ್ವರು ಯುವಕರು ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದು, ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಮಧ್ಯ ವಯಸ್ಕ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕರು ಚಿತ್ರ ಹಿಂಸೆ ನೀಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.