ETV Bharat / bharat

ವಿದ್ಯಾರ್ಥಿನಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಫೋಟೋ - ವಿಡಿಯೋ ತೆಗೆದುಕೊಂಡ ದುರುಳರು - ಬಾಲಕಿ ಅಶ್ಲೀಲ ಫೋಟೋಗಳು ತೆಗೆದ ದುರುಳರು

ರಾಜಸ್ಥಾನದಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಇಬ್ಬರು ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಗಳು ಆಕೆಯನ್ನು ಹೆದ್ದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

minor-girl-gang-rape-in-dausa
ವಿದ್ಯಾರ್ಥಿನಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಫೋಟೋ - ವಿಡಿಯೋ ತೆಗೆದುಕೊಂಡ ದುರುಳರು
author img

By

Published : Jul 14, 2022, 10:56 PM IST

ದೌಸಾ (ರಾಜಸ್ಥಾನ): ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ, ಕಾಮುಕರು ಈ ಅಪ್ರಾಪ್ತ ಬಾಲಕಿ ಅಶ್ಲೀಲ ಫೋಟೋಗಳು ತೆಗೆದು ಮತ್ತು ವಿಡಿಯೋಗಳನ್ನೂ ಮಾಡಿದ್ದಾರೆ.

12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಭಂಡಾರೇಜ್‌ ಪ್ರದೇಶದಲ್ಲಿರುವ ಕಾಲೇಜಿಗೆ ಹೋಗಿದ್ದಳು. ಈ ವೇಳೆ, ಸತೀಶ್ ಬೈರವ ಮತ್ತು ಲೋಕೇಶ್ ಬೈರವ ಎಂಬ ಇಬ್ಬರು ವಿದ್ಯಾರ್ಥಿನಿಯನ್ನು ಬಲವಂತವಾಗಿ ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮತ್ತು ಬರುವ ತಂಪು ಪಾನೀಯ ಕುಡಿಸಿದ್ದಾರೆ. ಬಳಿಕ ಇಬ್ಬರು ಕಾಮುಕರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಹೆದ್ದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳ ಕೂಡ ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ತನಗೆ ಗಂಡು ಮಗು ಆಗಲಿ ಎಂದು ದೇವಿ ಬಳಿ ಹರಕೆ: ಮೇಕೆ ಮೇಯಿಸುತ್ತಿದ್ದ ಯುವಕನ ಬಲಿ ಕೊಟ್ಟ ಕಟುಕ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.