ಖೂಂಟಿ(ಜಾರ್ಖಂಡ್): 10 ವರ್ಷದ ಬಾಲಕಿಯೋರ್ವಳ ಮೇಲೆ ಆರು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನ ಖೂಂಟಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಮತ್ತೋರ್ವನಿಗೋಸ್ಕರ ಶೋಧಕಾರ್ಯ ಮುಂದುವರೆದಿದೆ.
ತೊರ್ಪಾ ಬ್ಲಾಕ್ನಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಐವರು ಅಪ್ರಾಪ್ತರ ಬಂಧನ ಮಾಡಿ, ಮತ್ತೋರ್ವನಿಗೋಸ್ಕರ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರು 9ರಿಂದ 15ವರ್ಷದೊಳಗಿನವರಾಗಿದ್ದು, ಎಲ್ಲರೂ ಒಂದೇ ಶಾಲೆಯಲ್ಲಿ ಓದುತ್ತಿದ್ದಾರೆಂದು ತಿಳಿದು ಬಂದಿದೆ.
ಇದನ್ನೂ ಓದಿ: ವಿಡಿಯೋ: ನಿಂಬೆಗೂ ಬಂತು ಬಂಗಾರದ ಬೆಲೆ; 50 ಕೆಜಿ ಕದ್ದು ಪರಾರಿಯಾದ ಕಳ್ಳ
ಜಗಳದ ಬಳಿಕ ಬಾಲಕಿ ಮೇಲೆ ರೇಪ್: ತೊರ್ಪಾ ಬ್ಲಾಕ್ನ ಪಕ್ಕದ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಬಾಲಕಿ ಹಾಗೂ ಆರು ಬಾಲಕರು ಅಲ್ಲಿಗೆ ತೆರಳಿದ್ದರು. ಈ ವೇಳೆ ಯಾವುದೋ ವಿಷಯಕ್ಕೆ ಹುಡುಗಿಯೊಂದಿಗೆ ಜಗಳವಾಗಿದೆ. ರಾತ್ರಿ ವೇಳೆ ಬಾಲಕಿ ಒಂಟಿಯಾಗಿ ಮನೆಗೆ ಬರುತ್ತಿದ್ದಾಗ ಅಪ್ರಾಪ್ತ ಬಾಲಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮನೆಗೆ ಬಂದ ಸಂತ್ರಸ್ತೆ ಮನೆಯಲ್ಲಿ ಮಾಹಿತಿ ನೀಡಿದ್ದಾಳೆ.
ಘಟನೆ ಬಳಿಕ ಗ್ರಾಮದಲ್ಲಿ ಪಂಚಾಯ್ತಿ ನಡೆಸಿ, ಪ್ರಕರಣ ಇತ್ಯರ್ಥಪಡಿಸುವ ಪ್ರಯತ್ನ ನಡೆಸಲಾಗಿದೆ. ಆದರೆ, ಇದು ಫಲಕಾರಿಯಾಗದ ಕಾರಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.