ETV Bharat / bharat

ಅಪ್ರಾಪ್ತ ಮಗಳ ಮೇಲೆ ಬ್ಯಾಂಕ್‌ ಮ್ಯಾನೇಜರ್‌ ತಂದೆಯಿಂದ ಲೈಂಗಿಕ ದೌರ್ಜನ್ಯ - ಬಿಹಾರ ಕ್ರೈಂ ನ್ಯೂಸ್​​

ಹೆತ್ತ ಮಗಳ ಮೇಲೆ ಕಾಮುಕ ತಂದೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

MINOR GIRL
MINOR GIRL
author img

By

Published : Sep 14, 2021, 3:45 PM IST

ಮುಜಾಫರ್​ಪುರ(ಬಿಹಾರ): ಕಳೆದ ಮೂರು ವರ್ಷಗಳಿಂದ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಕಾಮುಕ ತಂದೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯಿಂದ ನೊಂದಿರುವ ಬಾಲಕಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ.

ಬಿಹಾರದ ಮುಜಾಫರ್​ಪುರದಲ್ಲಿ ಈ ಘಟನೆ ನಡೆದಿದೆ. ತಂದೆಯೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಬಾಲಕಿ ಆರೋಪಿಸಿದ್ದು ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಮೋತಿಹಾರಿ ಜಿಲ್ಲೆಯಲ್ಲಿ ಅರೆಸ್ಟ್ ಮಾಡಿದ್ದಾರೆ.

ಬ್ಯಾಂಕ್‌ ಮ್ಯಾನೇಜರ್‌ ಕೆಲಸದಲ್ಲಿ ತಂದೆ!

ಸಂತ್ರಸ್ತೆಯ ತಂದೆ ಬ್ಯಾಂಕ್​ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೂರು ವರ್ಷಗಳಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದರಿಂದ ನೊಂದಿರುವ ಬಾಲಕಿ, ಘಟನೆಯನ್ನು ತಾಯಿಗೆ ವಿವರಿಸಿದ್ದಳು. ಇದಾದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ಲೈಂಗಿಕ ದೌರ್ಜನ್ಯವೆಸಗಿರುವುದು ದೃಢಗೊಂಡಿದೆ.

ಇದನ್ನೂ ಓದಿ: ಹಳಿತಪ್ಪಿ ನದಿಗುರುಳಿದ ಗೂಡ್ಸ್​ ರೈಲು: ಅಪಾರ ಪ್ರಮಾಣದ ಗೋಧಿ ನೀರುಪಾಲು

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡಿಎಸ್ಪಿ ರಾಮನರೇಶ್​ ಪಾಸ್ವಾನ್​ ಸೂಚನೆ ಮೇರೆಗೆ ಮೋತಿಹಾರ್​​ನಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಆರೋಪಿಯ ವಿರುದ್ಧ ಪೊಕ್ಸೊ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್​ಗಳಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.