ETV Bharat / bharat

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಕಾಮುಕ - Minor girl raped, killed in Moradabad

ಕಳೆದ ಬುಧವಾರದಿಂದ ಕಾಣೆಯಾಗಿದ್ದ ಏಳು ವರ್ಷದ ಬಾಲಕಿ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.

Minor girl raped, killed in Moradabad
7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಕಾಮುಕ
author img

By

Published : Dec 26, 2021, 12:00 PM IST

ಮೊರಾದಾಬಾದ್‌ (ಉತ್ತರ ಪ್ರದೇಶ): ದೇಶದಲ್ಲಿ, ಅದರಲ್ಲಿಯೂ ಉತ್ತರ ಪ್ರದೇಶದಲ್ಲಿ ಮಹಿಳೆಯರು-ಮಕ್ಕಳ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಕಾಮುಕನ ಬಲೆಗೆ ಸಿಕ್ಕ ಏಳು ವರ್ಷದ ಬಾಲಕಿ ಪ್ರಾಣ ಬಿಟ್ಟಿದ್ದಾಳೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಕಾಂತ್ ಪ್ರದೇಶದಲ್ಲಿ ಕ್ರೂರಿಯೊಬ್ಬ ಅಪ್ರಾಪ್ತೆಯನ್ನು ಅಪಹರಿಸಿ, ಕಬ್ಬಿನ ಗದ್ದೆಗೆ ಹೊತ್ತೊಯ್ದು, ಅತ್ಯಾಚಾರ ಎಸಗಿದ್ದಲ್ಲದೇ ಬಾಲಕಿಯನ್ನು ಕೊಂದು ಬಿಸಾಕಿದ್ದಾನೆ.

ಕಳೆದ ಬುಧವಾರ ಬಾಲಕಿ ನಾಪತ್ತೆಯಾಗಿದ್ದು ಈ ಸಂಬಂಧ ಪೋಷಕರು ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಶವವನ್ನು ರೈತರೊಬ್ಬರು ಗಮನಿಸಿ ಶುಕ್ರವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಐಪಿಸಿ ವಿವಿಧ ಸೆಕ್ಷನ್‌ಗಳ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮ ತಂಡಗಳು ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಆರೋಪಿ ಕಂಬಿಗಳ ಹಿಂದೆ ಇರುತ್ತಾನೆ ಎಂದು ಮೊರಾದಾಬಾದ್​ನ ಪೊಲೀಸ್​ ಅಧಿಕಾರಿ ಮಹೇಶ್ ಗೌತಮ್ ತಿಳಿಸಿದ್ದಾರೆ.

ಮೃತ ಸಂತ್ರಸ್ತೆಯ ಮನೆಗೆ ಮೊರಾದಾಬಾದ್ ಸಂಸದ ಎಸ್.ಟಿ.ಹಸನ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.