ಶಿವಪುರಿ (ಮಧ್ಯಪ್ರದೇಶ) : ಮಧ್ಯಪ್ರದೇಶ ರಾಜ್ಯದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಸಿಧಿ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಮೂವರು ಅತ್ಯಾಚಾರ ನಡೆಸಿ, ಅವಳ ಖಾಸಗಿ ಭಾಗಕ್ಕೆ ರಾಡ್ ಹಾಕಿದ್ದರು. ಆ ಮಹಿಳೆಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಈ ಪ್ರಕರಣ ಮಾಸುವ ಮುನ್ನವೆ ಶಿವಪುರಿಯ ಪೋಹ್ರಿಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆ ಪೋಹ್ರಿ ಪೊಲೀಸ್ ಠಾಣೆ ಪ್ರದೇಶದ ಹಳ್ಳಿಯೊಂದರಲ್ಲಿ, ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ವೆಸಗಿದ್ದಾರೆ. ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು. ದೂರಿನಲ್ಲಿ ಮುವರು ಶಂಕಿತರ ಹೆಸರನ್ನು ಸೂಚಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಬಾಲಕಿಯನ್ನ ರಕ್ಷಿಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಕಂಡುಬಂದಿದೆ. ತಾನು ಅಂಗಡಿಗೆ ಹೋಗುವಾಗ, ನಮ್ಮ ಗ್ರಾಮದ ಯುವಕ ನನ್ನನ್ನು ಬಲವಂತವಾಗಿ ಹೊತ್ತುಕೊಂಡು ಹೋಗಿದ್ದ. ಅಲ್ಲಿ ಅವನ ಜೋತೆ ನಾಲ್ವರು, ಇದ್ದರೂ ಎಲ್ಲರು ಸೇರಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ಥೆ ದೂರು ನೀಡಿದ್ದಾಳೆ. ದೂರಿನ ಮೇರೆಗೆ ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಓದಿ : ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಕಬ್ಬಿಣದ ಸರಳು ಹಾಕಿದ ಪಾಪಿಗಳು