ಡಾರ್ಜಿಲಿಂಗ್ (ಪಶ್ಚಿಮ ಬಂಗಾಳ): ಡಾರ್ಜಿಲಿಂಗ್ ಜಿಲ್ಲೆಯ ಎರಡು ಭಾಗಗಳಲ್ಲಿ ಅತ್ಯಾಚಾರದ ಎರಡು ಪ್ರತ್ಯೇಕ ಆರೋಪಗಳು ಭಾರೀ ಭೀತಿಯನ್ನು ಸೃಷ್ಟಿಸಿವೆ. ಒಂದು ಘಟನೆ ಸಿಲಿಗುರಿಯ ಪಕ್ಕದ ಖರಿಬರಿ ಬ್ಲಾಕ್‌ನ ಹಳ್ಳಿಯಲ್ಲಿ ನಡೆದಿದ್ದರೆ, ಇನ್ನೊಂದು ಸಿಲಿಗುರಿ ಪಟ್ಟಣದಲ್ಲಿ ಜರುಗಿದೆ.
ಎರಡೂ ಕೇಸ್ಗಳಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ಫೋನ್‌ನಲ್ಲಿ ಕಾರ್ಟೂನ್ ತೋರಿಸುವುದಾಗಿ ಆಮಿಷವೊಡ್ಡಿ ಮೂರನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ವರದಿಯಾಗಿದೆ.
ಎರಡನೇ ಘಟನೆಯಲ್ಲಿ, ಖಾರಿಬರಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಖರಿಬರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಗುರುವಾರ ತಡರಾತ್ರಿ ಖರಿಬರಿ ಬ್ಲಾಕ್‌ನ ಬುರಗಂಜ್ ಪ್ರದೇಶದಿಂದ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಗಿಬ್ರಾನಸ್ ಕುಜೂರ್ (20) ಎಂದು ಗುರುತಿಸಲಾಗಿದೆ.
ಸಂತ್ರಸ್ತರ ಪೋಷಕರಿಬ್ಬರೂ ದಿನಗೂಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಯುವಕ ಮನೆಗೆ ಬಂದು ಬಾಲಕಿಗೆ ಮೊಬೈಲ್‌ನಲ್ಲಿ ಕಾರ್ಟೂನ್ ತೋರಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಷಯವನ್ನು ಬಹಿರಂಗಪಡಿಸಿದರೆ, ಕುಟುಂಬ ಸದಸ್ಯರನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮೊದಮೊದಲು ಏನನ್ನೂ ಹೇಳದ ಬಾಲಕಿ, ನಂತರ ಅಸ್ವಸ್ಥಗೊಂಡಾಗ ಅಜ್ಜಿ ಎದುರು ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ.
ಬಳಿಕ ಸಂತ್ರಸ್ತೆಯ ಕುಟುಂಬದವರು ತಡರಾತ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಖರಿಬರಿ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಆರೋಪಿಯನ್ನು ಸಿಲಿಗುರಿ ಉಪ-ವಿಭಾಗೀಯ ನ್ಯಾಯಾಲಯಕ್ಕೆ ಕರೆತಂದಾಗ, ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲು ಆದೇಶ ನೀಡಿದರು. "ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಸತ್ಯವನ್ನು ಹೊರಹಾಕಲು ಎಲ್ಲಾ ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ" ಎಂದು ಡಾರ್ಜಿಲಿಂಗ್ನ ಡಿಎಸ್ಪಿ (ಗ್ರಾಮೀಣ) ಅಚಿಂತ್ಯ ಗುಪ್ತಾ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ- ವ್ಯಕ್ತಿಯ ಬಂಧನ: ಮತ್ತೊಂದೆಡೆ, ಸಿಲಿಗುರಿಯಲ್ಲಿ ಇತರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪ್ರಧಾನ್ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪರೇಶ್ ರಾಯ್ (48) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ 11 ವರ್ಷದ ಬಾಲಕಿಯ ಮೇಲೆ ಆಕೆಯ ಪಕ್ಕ ಮನೆಯ ನಿವಾಸಿ ಪರೇಶ್ ರಾಯ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದನು. ಬಳಿಕ ಅಪ್ರಾಪ್ತೆ ತಾಯಿಗೆ ಈ ವಿಷಯ ತಿಳಿಸಿದ್ದಾಳೆ.
ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ: ನಂತರ ಅಪ್ರಾಪ್ತರ ಕುಟುಂಬದವರು ರಾಯ್ ವಿರುದ್ಧ ಪ್ರಧಾನ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಧಾನ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಆರೋಪಿಯನ್ನು ಸಿಲಿಗುರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಧೀಶರು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದ್ದಾರೆ. ಪ್ರಧಾನ್ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಬಾಲಕಿಗೆ ಎಂಟು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದವನಿಗೆ 97 ವರ್ಷಗಳ ಕಠಿಣ ಜೈಲು ಶಿಕ್ಷೆ..!