ETV Bharat / bharat

ಪೊಲೀಸ್ ಠಾಣೆ ಮೇಲೆ ಪೆಟ್ರೋಲ್​ ಬಾಂಬ್​ ಎಸೆದ ದುಷ್ಕರ್ಮಿಗಳು

ಭದ್ರತಾ ಪಡೆ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಪೆಟ್ರೋಲ್​ ಬಾಂಬ್​ ಎಸೆದಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ.

petrol bomb at police station
petrol bomb at police station
author img

By

Published : Jun 22, 2021, 5:01 PM IST

ಶ್ರೀನಗರ(ಜಮ್ಮು-ಕಾಶ್ಮೀರ): ಅಪರಿಚಿತ ದುಷ್ಕರ್ಮಿಗಳು ಜಮ್ಮು - ಕಾಶ್ಮೀರದ ಶ್ರೀನಗರದಲ್ಲಿನ ಖನ್ಯಾರ್​ ಪೊಲೀಸ್ ಠಾಣೆಯ ಮೇಲೆ ಪೆಟ್ರೋಲ್​ ಬಾಂಬ್​ ಎಸೆದಿರುವ ಘಟನೆ ನಡೆದಿದೆ. ಘಟನೆ ವೇಳೆ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲವಾದರೂ, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ.

ಭದ್ರತಾ ಪಡೆ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು, ಶ್ರೀನಗರದ ಹಳೇ ನಗರದ ಪ್ರದೇಶದಲ್ಲಿನ ಪೊಲೀಸ್ ಠಾಣೆ ಮೇಲೆ ದಾಳಿಕೋರರು ಈ ಕೃತ್ಯವೆಸಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ದಾಳಿ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ಶೋಧಕಾರ್ಯ ನಡೆಸಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರದಿಂದ ಉತ್ತರಪ್ರದೇಶಕ್ಕೆ ಬಂದು ಬೀದಿ ನಾಯಿ ಜೀವ ಉಳಿಸಿದ 'ಪ್ಯಾರ್​ ಫೌಂಡೇಶನ್​'

ಈಟಿವಿ ಭಾರತ್​ಗೆ ಪ್ರತಿಕ್ರಿಯೆ ನೀಡಿರುವ CRPF ವಕ್ತಾರ ಅಭಿರಾಮ್​, ದಾಳಿ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಘಟನಾ ಸ್ಥಳದಲ್ಲಿ ಭದ್ರತೆ ಒದಗಿಸಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.