ETV Bharat / bharat

9ನೇ ತರಗತಿ ವಿದ್ಯಾರ್ಥಿಯ ಕತ್ತುಹಿಸುಕಿ ಕೊಲೆ..! - ಮಥುರಾ ಸುದ್ದಿ

ಉತ್ತರ ಪ್ರದೇಶದ ಮಥುರಾದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಕತ್ತುಹಿಸುಕಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

murder
murder
author img

By

Published : Oct 1, 2021, 10:31 AM IST

ಮಥುರಾ (ಉತ್ತರ ಪ್ರದೇಶ): ತನ್ನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿಯೇ 9ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಮಥುರಾದ ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಹರ್ಷ ಠಾಕೂರ್ ಬುಧವಾರ ಮನೆಯಿಂದ ಹೊರಗೆ ಹೋಗಿದ್ದನು. ಸಂಜೆಯವರೆಗೂ ಹಿಂತಿರುಗದಿದ್ದಾಗ ಪೋಷಕರು ಪೊಲೀಸ್​ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಆದರೆ, ಗುರುವಾರ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವ ಕಾಡಿನಲ್ಲಿ ಆತ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಬಾಲಕನನ್ನು ಕತ್ತುಹಿಸುಕಿ ಕೊಲ್ಲಲಾಗಿದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: ಆಟವಾಡುತ್ತಾ 8ನೇ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಮಗು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬಾಲಕ ಕೊನೆಯದಾಗಿ ಬುಧವಾದ ಅಂಗಡಿಯೊಂದರಿಂದ ಕವರ್​ನಲ್ಲಿ ಆಹಾರ ಪದಾರ್ಥವನ್ನು ತೆಗೆದುಕೊಂಡು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಹರ್ಷ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಹೋಗಿದ್ದು, ಅಲ್ಲಿ ಏನಾದರೂ ಅಹಿತಕರ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.