ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ಅಕ್ಟೋಬರ್ನಲ್ಲಿ ಉತ್ತರ ಪ್ರದೇಶ ರಾಜ್ಯಾದ್ಯಂತ ಸರಣಿ ಮೆಗಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೂಲಗಳ ಪ್ರಕಾರ, ಉತ್ತರ ಪ್ರದೇಶ ರಾಜ್ಯದಲ್ಲಿ ಸುಮಾರು 12 ಮೆಗಾ ರ‍್ಯಾಲಿಗಳನ್ನು ನಡೆಸಲು ಚರ್ಚೆಗಳು ನಡೆಯುತ್ತಿದ್ದು, ಅವುಗಳಲ್ಲಿ 9 ಅಂತಿಮಗೊಂಡಿವೆ. ಸೆಪ್ಟೆಂಬರ್ 29 ರಂದು ಮೀರತ್‌ನಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
ಇದನ್ನೂ ಓದಿ: 20 ವರ್ಷಗಳಿಂದ ನಾಪತ್ತೆಯಾದ ಮಕ್ಕಳು: ಕರುಳ ಕುಡಿಗಳನ್ನು ಕಾಣಲು ಹಪಹಪಿಸುತ್ತಿದ್ದಾರೆ ಹೆತ್ತವರು
ಪ್ರಸ್ತುತ ಯೋಜನೆ ಪ್ರಕಾರ, ಪ್ರಿಯಾಂಕಾ ಗಾಂಧಿ ಅಕ್ಟೋಬರ್ 12 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭದ್ರಕೋಟೆಯಾದ ಗೋರಖ್‌ಪುರದಲ್ಲಿ ಮೆಗಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಆದಾಗ್ಯೂ, ಚರ್ಚೆಗಳು ನಡೆಯುತ್ತಿವೆ ಮತ್ತು ಸಂದರ್ಭಕ್ಕೆ ಅನುಗುಣವಾಗಿ ನಿರ್ದಿಷ್ಟ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಬಹುದು ಎಂದು ಮೂಲಗಳು ತಿಳಿಸಿವೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಎಲ್ಲ 403 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ 12,000 ಕಿ.ಮೀ ಪ್ರತಿಜ್ಞಾ ಯಾತ್ರೆ ಆಯೋಜಿಸಲಿದೆ.