ಎರ್ನಾಕುಲಂ (ಕೊಚ್ಚಿ): ಕಾರಿನ ಒಳಗೆ ಮಾಡೆಲ್ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ ಒಬ್ಬ ಮಹಿಳೆ ಹಾಗೂ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಮೂವರು ಯುವಕರು ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರ: ಯುವ ಮಾಡೆಲ್ ನಿನ್ನೆ ರಾತ್ರಿ 8:30 ರ ಸುಮಾರಿಗೆ ತನ್ನ ಸ್ನೇಹಿತನೊಂದಿಗೆ ಕೊಚ್ಚಿಯ ಬಾರ್‌ಗೆ ಬಂದಿದ್ದಾರೆ. ರಾತ್ರಿ 10 ಗಂಟೆಗೆ ಬಾರ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಕರು, ಮಾಡೆಲ್ಳನ್ನು ಅವರ ನಿವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಆದರೆ ಆಕೆಯ ಮಹಿಳಾ ಸ್ನೇಹಿತ ಕಾರಿನಲ್ಲಿ ತೆರಳಿರಲಿಲ್ಲ ಎನ್ನಲಾಗಿದೆ.
ಯುವಕ ಗುಂಪು ಕಾರಿನಲ್ಲಿ ನಗರದೆಲ್ಲೆಡೆ ಸುತ್ತಾಡಿ ರೂಪದರ್ಶಿಯ ಮೇಲೆ ಸರದಿಯಂತೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಬಳಿಕ ಯುವತಿಯನ್ನು ಕಾಕ್ಕನಾಡಿನ ಅವರ ಮನೆಯ ಮುಂದೆ ಡ್ರಾಪ್ ಮಾಡಿದ್ದಾರೆ. ಇಂದು ರೂಪದರ್ಶಿ ತನ್ನ ಸ್ನೇಹಿತೆಗೆ ವಿಷಯ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣ ಬಯಲಿಗೆ ಬಂದಿದ್ದು ಹೇಗೆ?: ಈ ಬಗ್ಗೆ ರೂಪದರ್ಶಿ, ಪೊಲೀಸರಿಗೆ ಶುಕ್ರವಾರ ಬೆಳಗ್ಗೆ ದೂರು ನೀಡಿದ್ದಾಳೆ. ಯುವತಿಯ ದೂರು ಸ್ವೀಕರಿಸಿದ ಪೊಲೀಸರು ರೂಪದರ್ಶಿ ಹೋದ ಬಾರ್ ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮಾಡೆಲ್ ಸ್ನೇಹಿತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೂವರು ಯುವಕರು ಕೊಡುಂಗಲ್ಲೂರು ಮೂಲದವರು ಎಂದು ತಿಳಿದು ಬಂದಿದೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮಾಡೆಲ್ ಇಂದು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪೊಲೀಸರು ಆ ರೂಪದರ್ಶಿಯನ್ನು ಕಲಮಾಸೇರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನು ಓದಿ: ಶ್ರದ್ಧಾ ಶವದ ಪಕ್ಕ ಕುಳಿತು ಗಾಂಜಾ ಸೇದಿದ್ದ ಅಫ್ತಾಬ್: ಮತ್ತೊಂದು ಬ್ಯಾಗ್ ಪತ್ತೆ, ಸ್ನೇಹಿತರ ಚಾಟಿಂಗ್ ಪರಿಶೀಲನೆ