ETV Bharat / bharat

ಆಗ್ರಾ ಮೆಟ್ರೋ ನಿರ್ಮಾಣ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

ಅಂದಾಜು 8,379.62 ಕೋಟಿ ರೂ. ವೆಚ್ಚದ ಆಗ್ರಾ ಮೆಟ್ರೋ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

Modi inaugurates construction of Agra Metro project
ಆಗ್ರಾ ಮೆಟ್ರೋ ನಿರ್ಮಾಣ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ
author img

By

Published : Dec 7, 2020, 3:59 PM IST

ನವದೆಹಲಿ: ಆಗ್ರಾ ಮೆಟ್ರೋ ಯೋಜನೆಯ ನಿರ್ಮಾಣ ಕಾರ್ಯಕ್ಕೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಆಗ್ರಾದ 15ನೇ ಬೆಟಾಲಿಯನ್ ಪಿಎಸಿ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಆಗ್ರಾದ ನಿವಾಸಿಗಳಿಗೆ ಅನುಕೂಲವಾಗುವುದರ ಜೊತೆಗೆ, ಪ್ರತಿ ವರ್ಷ ಆಗ್ರಾಗೆ ಭೇಟಿ ನೀಡುವ ಪ್ರವಾಸಿಗರಿಗೂ ಈ ಯೋಜನೆಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಆಗ್ರಾ ಮೆಟ್ರೋ ನಿರ್ಮಾಣ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

'ಸ್ವದೇಶ್ ದರ್ಶನ್ ಮತ್ತು ಪ್ರಸಾದ್' ನಂತಹ ಯೋಜನೆಗಳ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕೇಂದ್ರ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮೋದಿ ಹೇಳಿದ್ದಾರೆ. ಸರ್ಕಾರದ ಪ್ರಯತ್ನದಿಂದ ಭಾರತ ಈಗ ಪ್ರವಾಸ ಮತ್ತು ಪ್ರವಾಸೋದ್ಯಮ ಸ್ಪರ್ಧಾತ್ಮಕ ಸೂಚ್ಯಂಕದಲ್ಲಿ 34ನೇ ಸ್ಥಾನದಲ್ಲಿದೆ. 2013 ರಲ್ಲಿ ಭಾರತವು ಸೂಚ್ಯಂಕದಲ್ಲಿ 65ನೇ ಸ್ಥಾನದಲ್ಲಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ "ಸ್ಥಳೀಯ ಪ್ರವಾಸೋದ್ಯಮಕ್ಕಾಗಿ ಧ್ವನಿ ನೀಡುವ ಅವಶ್ಯಕತೆಯಿದೆ. ಕೋವಿಡ್ ಪರಿಸ್ಥಿತಿ ಸುಧಾರಿಸಿದ ನಂತರ ಪ್ರವಾಸೋದ್ಯಮ ಕ್ಷೇತ್ರದ ಮೋಡಿ ಮತ್ತೆ ಮರಳುತ್ತದೆ" ಎಂದು ಮೋದಿ ಆಶಿಸಿದ್ದಾರೆ.

ಆಗ್ರಾ ಮೆಟ್ರೋ ಯೋಜನೆಯು ಒಟ್ಟು 29.4 ಕಿ.ಮೀ. ಉದ್ದದ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ ಮತ್ತು ಪ್ರಮುಖ ಪ್ರವಾಸಿ ಆಕರ್ಷಣೆಗಳಾದ ತಾಜ್​ ಮಹಲ್, ಆಗ್ರಾ ಕೋಟೆ, ಸಿಕಂದ್ರವನ್ನು ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳೊಂದಿಗೆ ಸಂಪರ್ಕಿಸುತ್ತದೆ.

ಈ ಯೋಜನೆಯು ನಗರದ 26 ಲಕ್ಷ ಜನಸಂಖ್ಯೆಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಪ್ರತಿವರ್ಷ 60 ಲಕ್ಷಕ್ಕೂ ಹೆಚ್ಚು ಪ್ರವಾಸಿಗರಿಗೆ ಅನುಕೂಲವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.