ನವದೆಹಲಿ: ಜ್ವರ ಮತ್ತು ನಿಶಕ್ತಿ ಹಿನ್ನೆಲೆಯಲ್ಲಿ ದೆಹಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
-
I pray for the good health and speedy recovery of Dr. Manmohan Singh Ji.
— Narendra Modi (@narendramodi) October 14, 2021 " class="align-text-top noRightClick twitterSection" data="
">I pray for the good health and speedy recovery of Dr. Manmohan Singh Ji.
— Narendra Modi (@narendramodi) October 14, 2021I pray for the good health and speedy recovery of Dr. Manmohan Singh Ji.
— Narendra Modi (@narendramodi) October 14, 2021
ಈ ಕುರಿತು ಟ್ಟೀಟ್ ಮಾಡಿರುವ ಅವರು, ಡಾ.ಮನಮೋಹನ್ ಸಿಂಗ್ ಜೀ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಏಮ್ಸ್ಗೆ ಭೇಟಿ ನೀಡಿ ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಚನ್ನಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಟ್ಟೀಟ್ ಮೂಲಕ ಡಾ. ಸಿಂಗ್ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ್ದಾರೆ.