ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ 2022ರ ಹೊಸ ವರ್ಷದ ಮೊದಲ ದಿನವೇ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 10ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಡಿ ದೇಶದ 10 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ.ಜಮೆಯಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತನ್ನು ಬಿಡುಗಡೆ ಮಾಡಿರುವುದು ಮಾತ್ರವಲ್ಲದೆ, ಪ್ರಧಾನಿ ಮೋದಿ 351 ರೈತ ಉತ್ಪಾದನಾ ಸಂಸ್ಥೆಗಳಿಗೆ 14 ಕೋಟಿ ರೂಪಾಯಿ ಇಕ್ವಿಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದರಿಂದ ಸುಮಾರು 1.24 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ವರ್ಷಕ್ಕೆ 6000 ರೂ. ಹಣವನ್ನು ಅರ್ಹ ಫಲಾನುಭವಿ ರೈತರ ಖಾತೆಗೆ ಜಮಾ ಮಾಡುತ್ತದೆ. ಅದರ 9 ಕಂತುಗಳ ಹಣವನ್ನು ರೈತರು ಇದುವರೆಗೆ ಸ್ವೀಕರಿಸಿದ್ದರು.
ಇದೇ ವೇಳೆ ಪ್ರಧಾನಿ ಮೋದಿ ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ (ಎಫ್‌ಪಿಒ) 14 ಕೋಟಿ ರೂ.ಗೂ ಹೆಚ್ಚು ಇಕ್ವಿಟಿ ಅನುದಾನವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ. ಇದರಿಂದ ಸುಮಾರು 1.24 ಲಕ್ಷಕ್ಕೂ ಹೆಚ್ಚು ರೈತರಿಗೆ ಪ್ರಯೋಜನವಾಗಲಿದೆ.
ಇದನ್ನೂ ಓದಿ: ನಂದಿ ಬೆಟ್ಟದಲ್ಲಿ ಜ. 8, 9ರಂದು ಬಿಜೆಪಿ ಹೈಕಮಾಂಡ್ ಜೊತೆ ಸಚಿವರ ಸಭೆ: ಸಂಪುಟ ಪುನಾರಚನೆ ಚರ್ಚೆ?