ETV Bharat / bharat

ಚುನಾವಣೆ ಫಲಿತಾಂಶದಿಂದ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಮತ್ತಷ್ಟು ದೃಢ: ಮೋದಿಯಿಂದ ಮತದಾರರಿಗೆ ಅಭಿನಂದನೆ

''ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಗಳು ದೇಶದಲ್ಲಿನ ಪ್ರಜಾಪ್ರಭುತ್ವದ ಮೇಲೆ ಜನರ ಬಲವಾದ ನಂಬಿಕೆಯನ್ನು ಎತ್ತಿ ತೋರಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

author img

By

Published : Mar 2, 2023, 9:45 PM IST

Updated : Mar 2, 2023, 11:05 PM IST

North Eastern States Assembly Election Result
ಪ್ರಧಾನಿ ಮೋದಿಯಿಂದ ಮತದಾರರಿಗೆ ಅಭಿನಂದನೆ
ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು

ನವದೆಹಲಿ: ''ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಗಳು ದೇಶದಲ್ಲಿನ ಪ್ರಜಾಪ್ರಭುತ್ವ ಹಾಗೂ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಜನರ ಬಲವಾದ ನಂಬಿಕೆಯನ್ನು ತೋರಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಹೌದು, ಪ್ರಧಾನಿ ಮೋದಿ ಈ ಹೇಳಿಕೆ ನೀಡುತ್ತಿದ್ದಂತೆ ನೆರೆದಿದ್ದ ಸಭಿಕರು, "ಮೋದಿ, ಮೋದಿ, ಮೋದಿ" ಎಂದು ಕೂಗುವ ಮೂಲಕ ಪ್ರತಿಕ್ರಿಯಿಸಿದರು. ಮೂರು ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಗೆಲವಿಗಾಗಿ ಶ್ರಮಿಸಿದ್ದಾರೆ ಎಂದು ಪ್ರಧಾನಮಂತ್ರಿ ಶ್ಲಾಘಿಸಿದರು. "ಈಶಾನ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಈ ಭಾಗದಲ್ಲಿ ನಮ್ಮೆಲ್ಲರಿಗಿಂತ ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಚುನಾವಣೆ ವೇಳೆ, ಅವರು ಅನೇಕ ಸವಾಲುಗಳನ್ನು ಎದುರಿಸುತ್ತಾರೆ" ಎಂದು ಪ್ರಧಾನಿ ಮೋದಿ ಹೇಳಿದರು.

ಈಶಾನ್ಯದ ಜನರಿಗೆ ಧನ್ಯವಾದಗಳ ಸಂಕೇತವಾಗಿ ತಮ್ಮ ಮೊಬೈಲ್ ಫೋನ್​ನ ಟಾರ್ಚ್​​ನ್ನು ಆನ್ ಮಾಡಿ ಮತ್ತು ಅವುಗಳನ್ನು ಪ್ರದರ್ಶಿಸುವಂತೆ ಮೋದಿ ಪ್ರೇಕ್ಷಕರನ್ನು ಕೇಳಿಕೊಂಡರು. ಈ ವೇಳೆ ಕಾರ್ಯಕ್ರಮದ ಆವರಣದಲ್ಲಿ ಹೊಸ ಲೋಕವೇ ಸೃಷ್ಟಿಯಾದಂತೆ ಕಾಣಿಸಿತು. ಜನರಿಂದ ಜೋರಾದ ಶಿಳ್ಳೆ, ಚಪ್ಪಾಳೆ ಸದ್ದು ಕೇಳಿಬಂತು.

ಬಿಜೆಪಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ನೀಡಿದ್ದಕ್ಕಾಗಿ ಮೇಘಾಲಯದ ಜನತೆಗೆ ಧನ್ಯವಾದಗಳು. ರಾಜ್ಯದಲ್ಲಿ ಬಿಜೆಪಿಯ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಶ್ರಮಿಸುತ್ತಿರುವ ಬಿಜೆಪಿ ಮೇಘಾಲಯ ಘಟಕವನ್ನು ನಾನು ಶ್ಲಾಘಿಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಜನರಿಗೆ ಸೇವೆ ಸಲ್ಲಿಸಲು ಮತ್ತು ಉಜ್ವಲ ಭವಿಷ್ಯವನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಪಿಎಂ ಮೋದಿ- ಸಿಎಂ ರಿಯೊ ಜೋಡಿ ಕರಾಮತ್​: ಪಿಎಂ ಮೋದಿ ನೇತೃತ್ವದ ಎನ್‌ಡಿಎಯನ್ನು ಮತ್ತೆ ಅಧಿಕಾರಬೇಕಿದೆ. ಬಿಜೆಪಿ ಮರು ಆಯ್ಕೆ ಮಾಡುವ ಮೂಲಕ ಶಾಂತಿ ಮತ್ತು ಪ್ರಗತಿಯನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ನಾಗಾಲ್ಯಾಂಡ್‌ನ ಜನರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ಪಿಎಂ ಮೋದಿ ಮತ್ತು ಸಿಎಂ ರಿಯೊ ಅವರ ಜೋಡಿಯು ರಾಜ್ಯದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ಮುಂದುವರಿಸುತ್ತದೆ. ಜನರ ಸಂಪೂರ್ಣ ಆಕಾಂಕ್ಷೆಗಳನ್ನು ಪೂರೈಸುತ್ತದೆ ಎಂದು ಅಮಿತ್ ಶಾ ಭರವಸೆ ನೀಡಿದರು.

ಅಭಿವೃದ್ಧಿ ಪರವಾದ ರಾಜಕೀಯದ ವಿಜಯ: ಬಿಜೆಪಿ ಮೇಲೆ ಮತ್ತೆ ವಿಶ್ವಾಸವಿಟ್ಟಿದ್ದಕ್ಕಾಗಿ ನಾನು ತ್ರಿಪುರಾಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯು ಅಭಿವೃದ್ಧಿ ಪರವಾದ ರಾಜಕೀಯದ ವಿಜಯ ಗಳಿಸಿದೆ. ನಾವೆಲ್ಲರೂ ಒಟ್ಟಾಗಿ ಮುನ್ನಡೆಯುತ್ತೇವೆ ಮತ್ತು ಸಮೃದ್ಧ ತ್ರಿಪುರವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶಾನ್ಯ ವಿಧಾನಸಭಾ ಚುನಾವಣಾ ಫಲಿತಾಂಶಗಳ ಕುರಿತು ಮಾತನಾಡಿದರು.

ಇಂದು ನಾವು ನೋಡುತ್ತಿರುವ ವಿಧಾನಸಭಾ ಚುನಾವಣೆ ಫಲಿತಾಂಶಗಳು ಪ್ರಧಾನಿ ಮೋದಿಯವರ ದೃಷ್ಟಿಯಿಂದ ಅಂದ್ರೆ, ಬಡವರು, ಮಹಿಳೆಯರ ಸಬಲೀಕರಣ ಗೆಲುವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ತಿಪ್ರಾ ಮೋಥಾ ಪಕ್ಷದೊಂದಿಗೆ ಮೈತ್ರಿ ಮಾತುಕತೆ: ತ್ರಿಪುರಾಗೆ ಆಗಮಿಸಿದ ಕಾಂಗ್ರೆಸ್ ನಾಯಕರು

Last Updated : Mar 2, 2023, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.