ETV Bharat / bharat

Modi Surname Case: ರಾಹುಲ್ ಗಾಂಧಿ ಅರ್ಜಿ ವಿಚಾರಣೆ 2024ರ ಜನವರಿ 12ಕ್ಕೆ ಮುಂದೂಡಿದ ಪಾಟ್ನಾ ಹೈಕೋರ್ಟ್.. - Rahul Gandhi

ಮೋದಿ ಉಪನಾಮ ಪ್ರಕರಣದಿಂದ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾಟ್ನಾ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪಾಟ್ನಾ ನ್ಯಾಯಾಲಯವು ಈ ಪ್ರಕರಣದ ಅರ್ಜಿ ವಿಚಾರಣೆಯನ್ನು 2024ರ ಜ.12ಕ್ಕೆ ಮುಂದೂಡಿಕೆ ಮಾಡಿದೆ.

Modi Surname Case
ರಾಹುಲ್ ಗಾಂಧಿ
author img

By

Published : Jul 4, 2023, 3:23 PM IST

ಪಾಟ್ನಾ (ಬಿಹಾರ): ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾಟ್ನಾ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು 2024ರ ಜನವರಿ 12ಕ್ಕೆ ಮುಂದೂಡಿಕೆ ಮಾಡಲಾಗಿದೆ. ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಕುಮಾರ್ ಅವರು, ಮುಂದಿನ ಆದೇಶದವರೆಗೆ ಕೆಳ ನ್ಯಾಯಾಲಯದ ಆದೇಶದ ಮೇಲಿನ ತಡೆಯಾಜ್ಞೆ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು. ಕಳೆದ ವಿಚಾರಣೆಯಲ್ಲಿ, ಕೆಳ ನ್ಯಾಯಾಲಯದ ಆದೇಶವನ್ನು 2023ರ ಮೇ 15ರವರೆಗೆ ತಡೆ ಹಿಡಿಯುವ ಮೂಲಕ ನ್ಯಾಯಾಲಯವು ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು.

ಮುಂದಿನ ವರ್ಷದವರೆಗೆ ರಾಹುಲ್ ಗಾಂಧಿ ಪ್ರಕರಣದಲ್ಲಿ ತಡೆ: ಗಮನಾರ್ಹ ಎಂದರೆ ಪಾಟ್ನಾದ ಕೆಳ ನ್ಯಾಯಾಲಯವು ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಗಳ ಕುರಿತು ತಮ್ಮ ನಿಲುವನ್ನು ಪ್ರಸ್ತುತಪಡಿಸಲು 2023ರ ಏಪ್ರಿಲ್ 12ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಕೆಳ ನ್ಯಾಯಾಲಯದ ಆದೇಶದ ವಿರುದ್ಧ ರಾಹುಲ್ ಗಾಂಧಿ ಅವರು, ಈ ಆದೇಶವನ್ನು ರದ್ದುಗೊಳಿಸುವಂತೆ ಪಾಟ್ನಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯವು ಅವರ ಅರ್ಜಿಯನ್ನು ಸ್ವೀಕರಿಸುವ ಮೂಲಕ ಅವರಿಗೆ ಪರಿಹಾರವನ್ನು ನೀಡಿತ್ತು. ಇದರ ಪ್ರಕಾರ ರಾಹುಲ್​ ಗಾಂಧಿ ಅವರು, ಸದ್ಯಕ್ಕೆ ಪಾಟ್ನಾದ ಕೆಳ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿಲ್ಲ.

ಈ ಹಿಂದೆ ಶಿಕ್ಷೆ ವಿಧಿಸಿದ್ದ ಗುಜರಾತ್ ಕೋರ್ಟ್: 2019ರಲ್ಲಿ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಪ್ರತಿಕ್ರಿಯಿಸಿದ್ದರು. ಈ ಪ್ರಕರಣದಲ್ಲಿ ಬಿಹಾರದ ಹಿರಿಯ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು, ಪಾಟ್ನಾದ ಸಿವಿಲ್ ಕೋರ್ಟ್‌ನಲ್ಲಿ ದೂರು ನೀಡಿದ್ದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2024ರ ಜನವರಿ 12ರಂದು ನಡೆಯಲಿದೆ. ಮೋದಿ ಹೆಸರಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ, ಸೂರತ್ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ಅವರು ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಳ್ಳಬೇಕಾಗಿತ್ತು.

ಇದನ್ನೂ ಓದಿ: ಅಪರಾಧ ತಡೆಯಲು ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ.. ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳ ಮೇಲೆ ರೋಡ್​ ರೋಲರ್ ಸವಾರಿ- ವಿಡಿಯೋ

ಪ್ರಕರಣದ ಹಿನ್ನೆಲೆ ಏನು?: 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಉಪನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಕಾಂಗ್ರೆಸ್ ನಾಯಕನ ರಾಹುಲ್ ಗಾಂಧಿ ಹೇಳಿಕೆಯ ಮೇಲೆ ಗುಜರಾತ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಗುಜರಾತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದಾದ ಬಳಿಕ ರಾಹುಲ್ ಗಾಂಧಿ ಸದಸ್ಯತ್ವವೂ ಕಳೆದುಕೊಳ್ಳಬೇಕಾಯಿತು. ಇದೇ ವೇಳೆ, ಬಿಹಾರದಲ್ಲಿ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ: ಬುಡಕಟ್ಟು ಜನಾಂಗ ಹೊರಗಿಡಲು ಸಲಹೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.