ರಾಂಚಿ(ಜಾರ್ಖಂಡ್ ): ಮೋದಿ ಉಪನಾಮದ ವಿವಾದಾತ್ಮಕ ಹೇಳಿಕೆಗೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಂಚಿಯ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಕಳೆದ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅನಾಮಿಕಾ ಕಿಸ್ಕು ಅವರಿದ್ದ ಪೀಠ ಜೂ.16 ರಂದು ಭೌತಿಕ ಹಾಜರಾತಿ ದಿನಾಂಕವನ್ನು ನಿಗದಿಪಡಿಸಿತ್ತು. ಮೊದಲು ಮೇ 22 ರಂದು ಹಾಜರಾಗುವಂತೆ ಮೊದಲು ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ಆ ವೇಳೆ ಅವರ ವಕೀಲರು ಕಾಲಾವಕಾಶ ಕೇಳಿದ್ದರು. ಇದರ ಆಧಾರದ ಮೇಲೆ ಮುಂದಿನ ವಿಚಾರಣೆಯನ್ನು ಜೂ.16ಕ್ಕೆ ನಿಗದಿಪಡಿಸಲಾಗಿತ್ತು.
ಮೇ 3 ರಂದು ವಕೀಲರು ರಾಹುಲ್ ಗಾಂಧಿ ಅವರ ಭೌತಿಕ ಉಪಸ್ಥಿತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಅದನ್ನು ನ್ಯಾಯಾಲಯ ತಿರಸ್ಕರಿಸಿತು. ಇದೀಗ ರಾಹುಲ್ ಗಾಂಧಿ ಇಂದು ರಾಂಚಿಗೆ ಬಂದ ಬಳಿಕ ಕೋರ್ಟ್ಗೆ ಹಾಜರಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಅವರ ಪರ ವಕೀಲ ಪ್ರದೀಪ್ ಚಂದ್ರ ಉತ್ತರ ನೀಡಿದ್ದು, ರಾಹುಲ್ ಗಾಂಧಿ ಶುಕ್ರವಾರ ರಾಂಚಿಗೆ ಬರುತ್ತಿಲ್ಲ. ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ನಿಮ್ಮ ನಿಲುವೇನು ಎಂದು ಕೇಳಲಾಯಿತು. ಅದಕ್ಕೆ ಪ್ರತಿಕ್ರಿಯಿಸಿದ ಅವರು ಅದರ ಬಗ್ಗೆ ಈಗಲೇ ಏನೂ ಹೇಳಲಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಮೋದಿ ಉಪನಾಮ ಪ್ರಕರಣ: ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿದ ರಾಹುಲ್ ಗಾಂಧಿ
ಏನಿದು ಮೋದಿ ಉಪನಾಮ ಪ್ರಕರಣ: 2019ರ ಏಪ್ರಿಲ್ 13ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, 'ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ... ಇವರೆಲ್ಲರೂ 'ಮೋದಿ'ಎಂಬುದನ್ನು ಸಾಮಾನ್ಯ ಉಪನಾಮವಾಗಿ ಹೊಂದಿದ್ದಾರೆ. ಈ ರೀತಿಯ ಸರ್ನೇಮ್ ಹೊಂದಿರುವವರೆಲ್ಲರೂ ಕಳ್ಳರು' ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ರಾಹುಲ್ ಗಾಂಧಿ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಆರೋಪಿಸಿ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಗಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. 2019 ರ ಅಕ್ಟೋಬರ್ನಲ್ಲಿ ಕೋರ್ಟ್ ಮುಂದೆ ಹಾಜರಾಗಿದ್ದ ರಾಹುಲ್, ಇದೊಂದು ಸುಳ್ಳು 'ಮಾನಹಾನಿ ಪ್ರಕರಣ' ಎಂದು ಹೇಳಿದ್ದರು. ಈ ವಿವಾದಾತ್ಮಕ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ ರಾಹುಲ್ ಗಾಂಧಿ ಅವರು ಲೋಕಸಭೆಯ ಸದಸ್ಯತ್ವವನ್ನು ಕಳೆದುಕೊಂಡಿದ್ದರು.
ಸದ್ಯ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್‌ನಲ್ಲಿ ಮೂರು ಪ್ರಕರಣಗಳು ನಡೆಯುತ್ತಿವೆ. ಎರಡು ಪ್ರಕರಣಗಳು ಮೋದಿ ಉಪನಾಮಕ್ಕೆ ಸಂಬಂಧಿಸಿವೆ, ಮೂರನೇ ಪ್ರಕರಣವು ಅಮಿತ್ ಶಾ ವಿರುದ್ಧದ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದೆ. ಅಮಿತ್ ಶಾ ಪ್ರಕರಣದಲ್ಲಿ ಪ್ರತಾಪ್ ಕುಮಾರ್ ಚೈಬಾಸಾ ನ್ಯಾಯಾಲಯದಲ್ಲಿ ಮತ್ತು ಮೋದಿ ಉಪನಾಮ ಪ್ರಕರಣದಲ್ಲಿ ನವೀನ್ ಝಾ ರಾಂಚಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಎರಡು ಪ್ರಕರಣಗಳಲ್ಲಿ ರಾಹುಲ್ ಗಾಂಧಿಗೆ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ
ಜಾರ್ಖಂಡ್ ಹೈಕೋರ್ಟ್ನಲ್ಲಿ 3 ಪ್ರಕರಣ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಕೆಳ ನ್ಯಾಯಾಲಯವು ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ಹಿನ್ನಲೆಯಲ್ಲಿ ಲೋಕಸಭಾ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು. ಗಾಂಧಿಯವರ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ನಲ್ಲಿ ಒಟ್ಟು ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ:'ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇಂದು ಕರಾಳ ದಿನ': ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಪ್ರತಿಪಕ್ಷದ ನಾಯಕರು