ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲಾಗುತ್ತಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆನೋವಾಗಿ ಪರಿಣಮಿಸಿದ್ದು, ಹೀಗಾಗಿ ಮಹತ್ವದ ಸಭೆ ಕರೆದಿದ್ದಾರೆ.
ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಸಭೆ ಕರೆದಿದ್ದು, ಇದರಲ್ಲಿ ಉನ್ನತ ಅಧಿಕಾರಿಗಳು, ತಜ್ಞರು, ವಿವಿಧ ರಾಜ್ಯಗಳ ಪ್ರಮುಖ ಸಚಿವರು ಭಾಗಿಯಾಗುತ್ತಿದ್ದಾರೆ. ದೇಶದಲ್ಲಿನ ಕೊರೊನಾ ಪರಿಸ್ಥಿತಿ ಹಾಗೂ ಲಸಿಕೆ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
-
PM Narendra Modi will hold a meeting to review the COVID-19 and vaccination situation in India, at 8 pm today. Top officers across various ministries will participate. pic.twitter.com/4ibASzK7p3
— ANI (@ANI) April 17, 2021 " class="align-text-top noRightClick twitterSection" data="
">PM Narendra Modi will hold a meeting to review the COVID-19 and vaccination situation in India, at 8 pm today. Top officers across various ministries will participate. pic.twitter.com/4ibASzK7p3
— ANI (@ANI) April 17, 2021PM Narendra Modi will hold a meeting to review the COVID-19 and vaccination situation in India, at 8 pm today. Top officers across various ministries will participate. pic.twitter.com/4ibASzK7p3
— ANI (@ANI) April 17, 2021
ದೇಶದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿರುವ ಕಾರಣ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ, ಮಹತ್ವದ ಸೂಚನೆ ನೀಡಿದ್ದಾರೆ. ಇಷ್ಟಾದರೂ ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಕಡಿಮೆಯಾಗದ ಕಾರಣ ಇದೀಗ ಮಹತ್ವದ ಸಭೆ ಆಯೋಜನೆ ಮಾಡಿದ್ದಾರೆ.