ನವದೆಹಲಿ: ತೌಕ್ತೆ ಚಂಡಮಾರುತ ಸಾಕಷ್ಟು ಹಾನಿ ಸೃಷ್ಟಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮತ್ತು ದಿಯುಗೆ ಬುಧವಾರ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಬೆಳಗ್ಗೆ 9.30ಕ್ಕೆ ದೆಹಲಿಯಿಂದ ಹೊರಟು ಭಾವನಗರಕ್ಕೆ ಇಳಿಯಲಿದ್ದು, ಅಲ್ಲಿಂದ ಉನಾ, ದಿಯು, ಜಫರಾಬಾದ್ ಮತ್ತು ಮಹುವಾಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಮಾಹಿತಿ ದೊರಕಿದೆ. ನಂತರ ಮೋದಿ ಅಹಮದಾಬಾದ್‌ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: ರಾಜ್ಯದ ಪ್ರಮುಖ 6 ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್‌ಗೆ ಚಿಕಿತ್ಸೆ
ಗುಜರಾತ್‌ನಲ್ಲಿ ತೌಕ್ತೆ ಚಂಡಮಾರುತವು ಸಾಕಷ್ಟು ಹಾನಿ ಸೃಷ್ಟಿಸಿದೆ. ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ. ಹಲವಾರು ಮನೆಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಸದ್ಯಕ್ಕೆ ಗುಜರಾತ್ ಸಿಎಂ ವಿಜಯ್ ರೂಪಾನಿ ಚಂಡಮಾರುತದಿಂದಾದ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಈಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರ ಮಾಡಿರುವ ಕಾರಣದಿಂದ ಅತಿ ದೊಡ್ಡ ದುರಂತವನ್ನು ತಪ್ಪಿಸಲು ಸರ್ಕಾರ ಯಶಸ್ವಿಯಾಗಿದೆ ಎಂದಿದ್ದಾರೆ.