ETV Bharat / bharat

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆ - ಗೋಗುಂಡಾದ ಬಿಜೆಪಿ ಶಾಸಕ

ಬಿಜೆಪಿ ಶಾಸಕರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೋರ್ವಳು ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ.

BJP MLA
BJP MLA
author img

By

Published : Feb 5, 2021, 3:07 PM IST

ಉದಯಪುರ್​(ರಾಜಸ್ಥಾನ): ಗೋಗುಂಡಾದ ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ತನ್ನ ಮೇಲೆ ಬಿಜೆಪಿ ಶಾಸಕ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೋರ್ವಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ.

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ

ರಾಜಸ್ಥಾನದ ಗೋಗುಂಡಾ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್​ಲಾಲ್​ ಭಿಲ್​ ವಿರುದ್ಧ ಸುಖರ್​ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೀವ್​ ಪಚಾರ್ ತಿಳಿಸಿದ್ದಾರೆ.

ಮದುವೆ ನೆಪದಲ್ಲಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ ಮಹಿಳೆ ಆರೋಪಿಸಿದ್ದಾಳೆ. ಮಹಿಳೆ ಹಾಗೂ ಶಾಸಕ ಒಂದೇ ಸಮುದಾಯಕ್ಕೆ ಸೇರಿದ್ದು, ಕಳೆದ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದರು ಎನ್ನಲಾಗಿದೆ. ಕಾಂಗ್ರೆಸ್​ ಭದ್ರಕೋಟೆಯಾಗಿದ್ದ ಗೋಗುಂಡಾದಲ್ಲಿ ಬಿಜಿಪಿ ಶಾಸಕ ಪ್ರತಾಪ್​ಲಾಲ್​ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.