ದಿನದಿಂದ ದಿನಕ್ಕೆ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರಲು ಶುರುವಾಗಿದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಣೆ ಮಾಡಿದೆ. WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯಸಸ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಜಾಗತಿಕವಾಗಿ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆ ಕಂಡು ಬಂದಿದ್ದು, ಹೀಗಾಗಿ ಸಾರ್ವಜನಿಕರ ಆರೋಗ್ಯ ಕಾಳಜಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
-
🚨 BREAKING:
— World Health Organization (WHO) (@WHO) July 23, 2022 " class="align-text-top noRightClick twitterSection" data="
"For all of these reasons, I have decided that the global #monkeypox outbreak represents a public health emergency of international concern."-@DrTedros pic.twitter.com/qvmYX1ZBAL
">🚨 BREAKING:
— World Health Organization (WHO) (@WHO) July 23, 2022
"For all of these reasons, I have decided that the global #monkeypox outbreak represents a public health emergency of international concern."-@DrTedros pic.twitter.com/qvmYX1ZBAL🚨 BREAKING:
— World Health Organization (WHO) (@WHO) July 23, 2022
"For all of these reasons, I have decided that the global #monkeypox outbreak represents a public health emergency of international concern."-@DrTedros pic.twitter.com/qvmYX1ZBAL
ಭಾರತ ಸೇರಿದಂತೆ 75 ದೇಶಗಳಲ್ಲಿ ಈಗಾಗಲೇ ಮಂಕಿಪಾಕ್ಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಐವರು ದುರ್ಮರಣಕ್ಕೀಡಾಗಿದ್ದಾರೆ. ಇದರ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇರಳದಲ್ಲೂ ಈಗಾಗಲೇ ಮೂರು ಮಂಕಿಪಾಕ್ಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಪ್ರಪಂಚದಲ್ಲಿ 16,000 ಪ್ರಕರಣ ದಾಖಲಾಗಿವೆ.
ಇದನ್ನೂ ಓದಿರಿ: ಮಂಕಿಪಾಕ್ಸ್ ಹೇಗೆ ಹರಡುತ್ತದೆ? ಇದೆಷ್ಟು ಅಪಾಯಕಾರಿ?
ಏನಿದು ಮಂಕಿಪಾಕ್ಸ್?: ಮಂಕಿಪಾಕ್ಸ್ ಸಿಡುಬಿನ ಒಂದು ಪ್ರಭೇದವಾಗಿದೆ. ಸಿಡುಬುಗಳಲ್ಲಿ ಬರುವಂತೆ ಜ್ವರ, ತಲೆನೋವು, ಬೆನ್ನುನೋವು, ಮೈ-ಕೈ ನೋವು, ಸುಸ್ತು ಕಾಣಿಸಿಕೊಳ್ಳುತ್ತದೆ. ಪ್ರಮುಖವಾಗಿ ಗದ್ದದ ಬಳಿ, ಕಂಕುಳಿನಲ್ಲಿ ಸಣ್ಣ ಪ್ರಮಾಣದ ಉಂಡೆಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಸುಮಾರು 2ರಿಂದ 4 ವಾರಗಳ ಕಾಲ ಇರುತ್ತದೆ. ಯಾವುದೇ ಚಿಕಿತ್ಸೆ ಇಲ್ಲದೆಯೂ ಈ ಸೋಂಕು ಸರಿಹೋಗುತ್ತದೆ. ಆದರೆ, ವಯಸ್ಸಾದವರು, ಕ್ಯಾನ್ಸರ್ ರೋಗಿಗಳಿಗೆ ಇದು ಮಾರಕವಾಗುವ ಸಾಧ್ಯತೆ ಇರುತ್ತದೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಈ ಹಿಂದೆ ಸಿಡುಬು ರೋಗಿಗಳಲ್ಲಿ ಕಂಡುಬಂದಿದ್ದ ರೋಗಲಕ್ಷಣಗಳನ್ನು ಹೋಲುತ್ತದೆ. ಆದರೂ ಇದು ವೈದ್ಯಕೀಯವಾಗಿ ಕಡಿಮೆ ತೀವ್ರವಾಗಿರುತ್ತದೆ. 1980 ರಲ್ಲಿ ಸಿಡುಬು ನಿರ್ಮೂಲನೆಗೊಂಡಿದ್ದು ಹಾಗೂ ಅದರ ನಂತರ ಸಿಡುಬು ಲಸಿಕೆಯನ್ನು ನಿಲ್ಲಿಸಿದ ನಂತರ ಮಂಕಿಪಾಕ್ಸ್ ಪ್ರಮುಖವಾದ ಆರ್ಥೋಪಾಕ್ಸ್ ವೈರಸ್ ಆಗಿ ಹೊರಹೊಮ್ಮಿದೆ.