ಅಹಮದಾಬಾದ್ (ಗುಜರಾತ್): ಗುಜರಾತ್‌ನ ಮೊರ್ಬಿ ನಗರದಲ್ಲಿ ತೂಗು ಸೇತುವೆ ಕುಸಿತ ದುರಂತದಲ್ಲಿ ಸುಮಾರು 60ಕ್ಕೂ ಜನರು ಮೃತಪಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ವೇಳೆ ಮೃತರು ಮತ್ತು ಗಾಯಾಳುಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ.
ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸುಮಾರು ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಭಾನುವಾರ ಸಂಜೆ ಕುಸಿದು ಬಿದ್ದಿದೆ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿ ಸುಮಾರು ಜನರು ನದಿಗೆ ಬಿದ್ದಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.
-
મોરબીની દુર્ઘટનામાં જીવ ગુમાવનાર નાગરિકોના પરિવારજનો પ્રત્યે સંવેદના વ્યક્ત કરું છું. રાજ્ય સરકાર પ્રત્યેક મૃતકના પરિવારજનને ચાર લાખ રૂપિયા અને ઇજાગ્રસ્તોને ૫૦,૦૦૦ રૂપિયાની સહાય આપશે.
— Bhupendra Patel (@Bhupendrapbjp) October 30, 2022 " class="align-text-top noRightClick twitterSection" data="
">મોરબીની દુર્ઘટનામાં જીવ ગુમાવનાર નાગરિકોના પરિવારજનો પ્રત્યે સંવેદના વ્યક્ત કરું છું. રાજ્ય સરકાર પ્રત્યેક મૃતકના પરિવારજનને ચાર લાખ રૂપિયા અને ઇજાગ્રસ્તોને ૫૦,૦૦૦ રૂપિયાની સહાય આપશે.
— Bhupendra Patel (@Bhupendrapbjp) October 30, 2022મોરબીની દુર્ઘટનામાં જીવ ગુમાવનાર નાગરિકોના પરિવારજનો પ્રત્યે સંવેદના વ્યક્ત કરું છું. રાજ્ય સરકાર પ્રત્યેક મૃતકના પરિવારજનને ચાર લાખ રૂપિયા અને ઇજાગ્રસ્તોને ૫૦,૦૦૦ રૂપિયાની સહાય આપશે.
— Bhupendra Patel (@Bhupendrapbjp) October 30, 2022
ಇದೇ ವೇಳೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಈಗಾಗಲೇ ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್ ಸೇರಿದಂತೆ ಇತರ ಪಡೆಗಳು ರಕ್ಷಣಾ ಕಾರ್ಯ ನಡೆಸಿವೆ. ಗೃಹ ಸಚಿವರನ್ನು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮೇಲುಸ್ತುವಾರಿ ಮಾಡುವಂತೆ ಸೂಚಿಸಿರುವುದಾಗಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.
ಇತ್ತ, ಈ ದುರಂತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
-
PM @narendramodi has announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia) October 30, 2022 " class="align-text-top noRightClick twitterSection" data="
">PM @narendramodi has announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia) October 30, 2022PM @narendramodi has announced an ex-gratia of Rs. 2 lakh from PMNRF for the next of kin of each of those who lost their lives in the mishap in Morbi. The injured would be given Rs. 50,000.
— PMO India (@PMOIndia) October 30, 2022
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಘಟನೆಯ ಬಗ್ಗೆ ದಿಗ್ಭ್ರಾಂತಿ ವ್ಯಕ್ತಪಡಿಸಿದ್ದು, ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ತಲುಪಲಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು, ರಾಜ್ಯ ಸರ್ಕಾರದಿಂದಲೂ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಗುಜರಾತ್ನಲ್ಲಿ ಭಾರಿ ದುರುಂತ.. ಬ್ರಿಡ್ಜ್ ಕುಸಿದು 32ಕ್ಕೂ ಹೆಚ್ಚು ಜನ ದುರ್ಮರಣ