ನವದೆಹಲಿ: ಭಾರತದಲ್ಲಿ ಇದೇ ಮೊದಲ ಸಲ ಲಿಂಗಾನುಪಾತದಲ್ಲಿ ಪುರುಷರಿಗಿಂತಲೂ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ಸಮೀಕ್ಷೆವೊಂದು ವರದಿ ಬಹಿರಂಗಗೊಳಿಸಿದೆ. ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ-5ರ ಪ್ರಕಾರ ಭಾರತದಲ್ಲಿ 1,000 ಪುರುಷರಿಗೆ 1,020 ಮಹಿಳೆಯರಿದ್ದಾರೆಂದು ತಿಳಿದು ಬಂದಿದೆ.
ಭಾರತದಲ್ಲಿ 1876ರಿಂದಲೂ ಸಮೀಕ್ಷೆ ನಡೆಸಲಾಗುತ್ತಿದ್ದು, ಆದರೆ ಇದೇ ಮೊದಲ ಸಲ ಪುರುಷರಿಗಿಂತಲೂ ಮಹಿಳೆಯರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು 2015-16ರಲ್ಲಿ 929ಕ್ಕೆ 919 ಮಹಿಳೆಯರಿದ್ದರು. ಆದರೆ 2005-06ರ ವೇಳೆ ಲಿಂಗಾನುಪಾತ 1000: 1000 ಆಗಿತ್ತು. ಆದರೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ರಿಲೀಸ್ ಮಾಡಿರುವ ಸಮೀಕ್ಷೆ ಪ್ರಕಾರ ಲಿಂಗಾನುಪಾತದಲ್ಲಿ ಸಮ ಕಂಡು ಬಂದಿದೆ.
ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪೈಕಿ ಭಾರತ ಎರಡನೇ ಸ್ಥಾನದಲ್ಲಿದ್ದು, ಪುರುಷರಿಗಿಂತಲೂ ಮಹಿಳೆಯರು ಹೆಚ್ಚು ವರ್ಷಗಳ ಕಾಲ ಜೀವಿಸುತ್ತಿದ್ದಾರೆ ಎಂಬ ಅಂಶ ಕೂಡ ಬೆಳಕಿಗೆ ಬಂದಿದೆ. ಈಗಲೂ ಕೂಡ ಕೆಲವೊಂದು ರಾಜ್ಯಗಳಲ್ಲಿ ಹೆಣ್ಣು ಮಕ್ಕಳಿಗಿಂತಲೂ ಗಂಡು ಮಗುವಿಗೆ ಹೆಚ್ಚಿನ ಆದ್ಯತೆ ನೀಡಲಾಗ್ತಿದೆ.
ಇದೇ ವರದಿ ಪ್ರಕಾರ ದೇಶದ 14 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಅರ್ಧಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆಂಬ ಮಾಹಿತಿ ಕೂಡ ಹೊರಬಿದ್ದಿದೆ.