ಕರಿಂಗಂಜ್(ಅಸ್ಸೋಂ) : ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಸ್ಸೋಂನ ಕರಿಂಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕರಿಂಗಂಜ್ ಜಿಲ್ಲೆಯ ಗಂಗಪಾರ್ನ ದಲ್ಸರಾ ಗ್ರಾಮದ ನಿವಾಸಿ ಹನ್ನಾ ಬೇಗಂ ಎಂದು ಗುರುತಿಸಲಾಗಿದೆ. ಮಹಿಳೆಯ ಈ ಕಠಿಣ ನಿರ್ಧಾರಕ್ಕೆ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ.
ಇದನ್ನೂ ಓದಿ: ದೇವಿ ಮೂರ್ತಿ ನಿಮಜ್ಜನ ವೇಳೆ ಅವಘಡ : ನದಿಯಲ್ಲಿ ಮುಳುಗಿ ಐವರ ದುರ್ಮರಣ
ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮನೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.