ವಿಶಾಖಪಟ್ಟಣಂ (ಆಂಧ್ರ ಪ್ರದೇಶ): ಜಿಲ್ಲೆಯ ಅನಕಾಪಲ್ಲಿ ಎನ್ಜಿಒ ಕಾಲೋನಿಯಲ್ಲಿ ವಾಸಿಸುತ್ತಿರುವ ವರುಣ್ಕುಮಾರ್ಗೆ ಕೊರೊನಾ ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಹಿತ ಬೆಡ್ ವ್ಯವಸ್ಥೆ ಇಲ್ಲದ ಕಾರಣದಿಂದ ಮನೆಯಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತೀವ್ರ ಅಸ್ವಸ್ಥತೆಯಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: 'ನಂಗೆ ಉಸಿರಾಡಲು ಆಗ್ತಿಲ್ಲ, ನನ್ನ ಹೆಂಡತಿಯನ್ನ ಹುಷಾರಾಗಿ ನೋಡಿಕೊಳ್ಳಿ'... ಕೊರೊನಾಗೆ ಬಲಿಯಾದವನ ಕೊನೆಯ ಮಾತು!
ವರುಣ್ ಕುಮಾರ್ ತಾಯಿ ಪದ್ಮ ಅವರಲ್ಲೂ ಕೊರೊನಾ ಸೋಂಕು ಕಂಡುಬಂದಿದ್ದು, ಅವರನ್ನು ಅನಕಾಪಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಆದಾದ ನಂತರ ಪದ್ಮ ಅವರ ಆರೋಗ್ಯ ಕ್ಷೀಣಿಸತೊಡಗಿದ್ದು, ಎನ್ಟಿಆರ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಸರಿಯಾದ ಚಿಕಿತ್ಸೆ ಸಿಗದೆ ಆಕೆ ಅಲ್ಲಿ ಸಾವನ್ನಪ್ಪಿದ್ದಾರೆ.
ಆಕ್ಸಿಜನ್ ಸಿಗದ ಕಾರಣದಿಂದಲೇ ಮಗ ಮತ್ತು ತಾಯಿ ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.