ETV Bharat / bharat

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ - etv bharata kannada

ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

mother-committed-suicide-along-with-her-three-children-in-palamu-jharkhand
ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಶರಣಾದ ತಾಯಿ
author img

By

Published : Mar 29, 2023, 7:26 PM IST

ಪಲಾಮು(ಜಾರ್ಖಂಡ್): ತನ್ನ ಮೂವರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಪಲಾಮು ಜಿಲ್ಲೆಯ ಮೇದಿನಿನಗರದಲ್ಲಿ ನಡೆದಿದೆ. ಮಹಿಳೆ ಮತ್ತು ಮೂವರು ಮಕ್ಕಳ ಶವಗಳು ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿರುವುದು ಕಂಡುಬಂದಿದೆ. ಮಕ್ಕಳು 3 ರಿಂದ 7 ವರ್ಷದೊಳಗಿನವರು ಎಂದು ತಿಳಿದುಬಂದಿದೆ. ವಿಷಯ ತಿಳಿದ ಪಟ್ಟಣ ಪೊಲೀಸ್ ಠಾಣಾಧಿಕಾರಿ ಅಭಯ್ ಕುಮಾರ್ ಸಿನ್ಹಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಮಹಿಳೆಯನ್ನು ಮನಿತಾ ದೇವಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಹರಿಹರಗಂಜ್​ನ ರವಿ ಸಿಂಗ್ ಅವರನ್ನು ವಿವಾಹವಾಗಿದ್ದರು. ಮಾಹಿತಿಯ ಪ್ರಕಾರ, ಮಹಿಳೆ 20 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಬುಧವಾರ ಮಕ್ಕಳೊಂದಿಗೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಘಟನಾ ಸ್ಥಳದಿಂದ ಮೊಬೈಲ್ ಫೋನ್​ ವಶಪಡಿಸಿಕೊಂಡು, ಎಲ್ಲ ಆಯಾಮದಿಂದಲೂ ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಮೃತ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮನಿತಾ ದೇವಿ ಅವರ ತಾಯಿಯ ಮನೆ ಪಲಮುವಿನ ಸತ್ಬರ್ವಾ ಪೊಲೀಸ್ ಠಾಣೆ ಪ್ರದೇಶದ ಏಕ್ತಾ ಗ್ರಾಮದಲ್ಲಿದೆ. ಮಹಿಳೆ ಮತ್ತು ಅವರ ಮಕ್ಕಳ ಮೃತದೇಹಗಳು ಬಹಳ ಸಮಯದವರೆಗೆ ರೈಲ್ವೆ ಟ್ರ್ಯಾಕ್ ಮೇಲೆ ಬಿದಿದ್ದವು. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಂಎಂಸಿಎಚ್​ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪಟ್ಟಣ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಭಯ್ ಕುಮಾರ್ ಸಿನ್ಹಾ ತಿಳಿಸಿದ್ದು, ಘಟನೆಯ ನಂತರ, ಒಂದು ಗಂಟೆಗೂ ಹೆಚ್ಚು ಕಾಲ ಮೇಲ್ಸೇತುವೆಯಲ್ಲಿ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಘಟನೆಯ ಬಗ್ಗೆ ಪೊಲೀಸರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಇಬ್ಬರು ಮಕ್ಕಳನ್ನು ಸಾಯಿಸಲು ಯತ್ನ, ತಾಯಿಯೂ ಆತ್ಮಹತ್ಯೆ: ಒಬ್ಬ ಮಗಳು ಪ್ರಾಣಾಪಾಯದಿಂದ ಪಾರು

ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.. ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಕೊಲ್ಲಂ ಜಿಲ್ಲೆಯ ಪುನಲೂರು ಮೂಲದ ರಮ್ಯಾ ರಾಜ್ (30) ಮಕ್ಕಳ ಸಮೇತ ಸಾವಿಗೆ ಶರಣಾಗಿದ್ದ ಮಹಿಳೆ. ಪುನಲೂರು ರಬ್ಬರ್ ಪಾರ್ಕ್​ ಬಳಿ ಈ ದುರ್ಘಟನೆ ನಡೆದಿತ್ತು. ರಮ್ಯಾ ತನ್ನ 5 ವರ್ಷದ ಮಗಳು ಮತ್ತು 3 ವರ್ಷದ ಮಗನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ಈ ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ರಮ್ಯಾ ಸೇರಿದಂತೆ ಮಕ್ಕಳನ್ನು ನದಿಯಿಂದ ದಡಕ್ಕೆ ತಂದಿದ್ದರು. ಆದರೇ ಅವರನ್ನು ಬದುಕಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ:ವಿಜಯಪುರ: ಮೂರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.