ಗೋಂಡಾ (ಉತ್ತರಪ್ರದೇಶ): ಜಿಲ್ಲೆಯ ತಾರಬಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಪ್ರದೇಶದ ಮರವೊಂದರಲ್ಲಿ ತಾಯಿ-ಮಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಓದಿ:ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..5 ಗಂಟೆಗಳ ಕಾಲ ನರಕಯಾತನೆ ಅನುಭವಿಸಿದ ಸಂತ್ರಸ್ತೆ!
ಮಹಿಳೆ ಮತ್ತು ಆಕೆಯ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಾರಬಗಂಜ್ ಪೊಲೀಸ್ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಗ್ರಾಮದ ಯುವಕನೊಬ್ಬ ಇವರಿಗೆ ಕಿರುಕುಳ ನೀಡುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬ ಸದಸ್ಯರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿ ಯುವಕನನ್ನು ಬಂಧಿಸಿದ್ದಾರೆ.