ತೂತುಕುಡಿ : ತೂತುಕುಡಿ ಜಿಲ್ಲೆಯ ಕೋವಿಲ್ಪಟ್ಟಿಯ ರೆಸ್ಟೋರೆಂಟ್‌ನಲ್ಲಿ ಪರೋಟಾ ತಿಂದು ತಾಯಿ-ಮಗಳು ಸಾವನ್ನಪ್ಪಿರುವ ದುರಂತ ನಡೆದಿದೆ. ಕರಪಗಮ್ಮ (33) ಹಾಗೂ ಈಕೆಯ ಮಹಳು ದರ್ಶಿನಿ (7) ಎಂಬುವರು ಮೃತ ದುರ್ದೈವಿಗಳು.
ಇವರು ಮಂಗಳವಾರ ರಾತ್ರಿ ಕೋವಿಲ್ಪಟ್ಟಿಯಲ್ಲಿ ಖಾಸಗಿ ರೆಸ್ಟೋರೆಂಟ್‌ನಲ್ಲಿ ಪರೋಟಾ ತಿಂದಿದ್ದಾರೆ. ನಂತರ ಹತ್ತಿರದ ಅಂಗಡಿಗೆ ಹೋಗಿ ತಂಪು ಪಾನೀಯ ಸೇವಿಸಿ ಮನೆಗೆ ಮರಳಿದ್ದರು. ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ತಾಯಿ ಮತ್ತು ಮಗಳು ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದಾರೆ.
ತಕ್ಷಣವೇ ಸಂಬಂಧಿಕರು ಮತ್ತು ನೆರೆಹೊರೆಯವರು ಅವರನ್ನು ಚಿಕಿತ್ಸೆಗಾಗಿ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತಿರುನೆಲ್ವೇಲಿ ಪಾಳ್ಯಂ ಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದ್ದಾರೆ
ಆದರೆ, ಪಾಳ್ಯಂಕೋಟೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರನ್ನು ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಈ ಕುರಿತು ಕೋವಿಲ್ಪಟ್ಟಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.