ಚಿತ್ತೋರ್ಗಢ (ರಾಜಸ್ತಾನ): ತಾಯಿಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಹಾಕಿ ಕೊಂದು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಚಿತ್ತೋರ್ಗಢ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಬುಧವಾರ ರಾತ್ರಿ ಈ ಕೃತ್ಯ ನಡೆದಿದ್ದು, ಪತಿ ಯಾವುದೋ ಕೆಲಸದ ನಿಮಿತ್ತ ಹೊರಹೋಗಿ ವಾಪಸ್ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರು ಭೂರಾಲಾಲ್ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಎಫ್‌ಎಸ್‌ಎಲ್ ತಂಡವನ್ನು ಕರೆಸಿ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ. ತಾಯಿ ಮೊದಲು ಮೂವರು ಮಕ್ಕಳನ್ನು ನೇಣು ಬಿಗಿದು ಸಾಯಿಸಿದ ಬಳಿಕ ಅವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ನಾಲ್ಕು ಶವಗಳನ್ನು ಹೊರತೆಗೆದು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ.
ಇದನ್ನೂ ಓದಿ: ಬಿಟ್ಟು ಹೋದ ಪತ್ನಿ, ಕೈ ಕೊಡುವ ಕರೆಂಟ್; ಕುಡಿದ ಮತ್ತಲ್ಲಿ ಟ್ರಾನ್ಸ್ಫಾರ್ಮ್ ಕಂಬ ಏರಿದ ವ್ಯಕ್ತಿ!