ETV Bharat / bharat

ವಿವಾಹೇತರ ಸಂಬಂಧ ಉಳಿಸಿಕೊಳ್ಳಲು ಜನ್ಮ ನೀಡಿದ ಮಗುವನ್ನೇ ಕೊಂದ ತಾಯಿ! - ಅಕ್ರಮ ಸಂಬಂಧ ಉಳಿಸಿಕೊಳ್ಳಲು ಮಗುವಿನ ಕೊಲೆ

ಗಂಡನಿಂದ ದೂರವಾಗಿದ್ದ ಮಹಿಳೆಯೋರ್ವಳು ವಿವಾಹೇತರ ಸಂಬಂಧ ಉಳಿಸಿಕೊಳ್ಳುವ ಉದ್ದೇಶದಿಂದ ಹೆತ್ತ ಮಗುವಿನ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

Mother killed her own child
Mother killed her own child
author img

By

Published : Mar 25, 2022, 9:42 PM IST

ನೀಲಗಿರಿ(ತಮಿಳುನಾಡು): ಅಕ್ರಮ ಸಂಬಂಧ ಉಳಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೋರ್ವಳು ಜನ್ಮ ನೀಡಿರುವ ಮಗುವನ್ನೇ ಕೊಲೆಗೈದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಊಟಿ ಪೊಲೀಸರು 38 ವರ್ಷದ ಮಹಿಳೆಯನ್ನ ಬಂಧನ ಮಾಡಿದ್ದು, ವಿಚಾರಣೆ ನಡೆಸಿದಾಗ ವಿವಾಹೇತರ ಸಂಬಂಧ ಉಳಿಸಿಕೊಳ್ಳಲು ಮಗುವಿನ ಕೊಲೆ ಮಾಡಿರುವುದಾಗಿ ತಿಳಿಸಿದ್ದಾಳೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಮಾರ್ಚ್​ 14ರಂದು ಊಟಿ ಸರ್ಕಾರಿ ವೈದ್ಯಕೀಯ ಕಾಲೇಜ್​​​ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಇದೆ ಎಂದು ತಾಯಿ ಹೇಳಿಕೆ ನೀಡಿದ್ದಳು. ಆದರೆ, ಅದರ ದೇಹದ ಮೇಲೆ ಯಾವುದೇ ರೀತಿಯ ಗಾಯಗಳಾಗಿರಲಿಲ್ಲ.

ಇದನ್ನೂ ಓದಿ: ಯೋಗಿ ಸಂಪುಟದಲ್ಲಿ 2 ಡಜನ್ ಹಳಬರಿಗೆ ಕೊಕ್‌; ಮಾಜಿ ರಾಜ್ಯಪಾಲೆಗೆ ಸಚಿವ ಸ್ಥಾನ!

ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ಆರಂಭಿಸಿದಾಗ ಬೆಚ್ಚಿಬೀಳಿಸುವ ಸತ್ಯ ಬಹಿರಂಗಗೊಂಡಿದೆ. ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದು, ಯಾರಿಗೂ ಗೊತ್ತಿಲ್ಲದ ರೀತಿಯಲ್ಲಿ ಆತನೊಂದಿಗೆ ಮದುವೆ ಮಾಡಿಕೊಂಡಿದ್ದಾಳೆ. ಇದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಯಾವಾಗಲೂ ಬ್ಯುಸಿಯಾಗಿರುತ್ತಿದ್ದಳು.

ಈ ಎಲ್ಲ ಕೆಲಸಗಳಿಗೆ ಮಗು ಅಡ್ಡಿಯಾಗುತ್ತಿದೆ ಎಂದು ಅದನ್ನ ಕೊಲೆ ಮಾಡಿದ್ದಾಳೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದಾಗ ಅದನ್ನ ಥಳಿಸಿದ್ದು, ಆಹಾರದಲ್ಲಿ ಮದ್ಯ ಮಿಶ್ರಣ ಮಾಡಿ ತಿನ್ನಿಸಿದ್ದಳು ಎಂಬುದು ಸಾಬೀತುಗೊಂಡಿದ್ದು, ಉಸಿರುಗಟ್ಟಿ ಅದು ಜೀವ ಬಿಟ್ಟಿದೆ ಎಂದು ವರದಿಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.