ETV Bharat / bharat

ಜೈಲು ಗೋಡೆ ಕುಸಿತ: 22 ಕೈದಿಗಳಿಗೆ ಗಾಯ, ಓರ್ವನ ಸ್ಥಿತಿ ಚಿಂತಾಜನಕ

author img

By

Published : Jul 31, 2021, 10:44 AM IST

ಜೈಲು ಗೋಡೆ ಕುಸಿದು 22 ಕೈದಿಗಳಿಗೆ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.

barrack wall collapse
barrack wall collapse

ಭಿಂದ್(ಮಧ್ಯಪ್ರದೇಶ): ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಜಿಲ್ಲೆಯ ಜೈಲಿನ ಗೋಡೆ ಕುಸಿದು 22 ಕೈದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸೆಲ್​ ನಂಬರ್ 6 ರಲ್ಲಿ ಈ ಅವಘಡ ಸಂಭವಿಸಿದೆ ಎಂದು ಭಿಂದ್ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.

ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ ಗ್ವಾಲಿಯರ್​​ನ ಉನ್ನತ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯ ಸಮಯದಲ್ಲಿ ಜೈಲಿನೊಳಗೆ 255 ಮಂದಿ ಕೈದಿಗಳಿದ್ದರು. ನಮಗೆ ಮಾಹಿತಿ ದೊರೆತ ಕೂಡಲೇ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣ ಸ್ಫೋಟಕ ವಶ

ಜೈಲಿನ ಕಟ್ಟಡವು ತುಂಬಾ ಹಳೆಯದಾಗಿದ್ದು, ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕುಸಿದಿರಬಹುದು ಎಂದು ಅಧಿಕಾರಿ ಶಂಕಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.