ರಾಜಘಡ್(ಮಧ್ಯಪ್ರದೇಶ): ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ರಿಕ್ಷಾ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜಘಡ್ದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 52ರ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್ಗಢ್ದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಏಕಾಏಕಿ ಬೀದಿನಾಯಿ ಅಡ್ಡ ಬಂದಿದೆ. ಈ ವೇಳೆ ಚಾಲಕ ನಾಯಿಯನ್ನು ರಕ್ಷಣೆ ಮಾಡಲು ಹೋಗಿದ್ದಾನೆ. ಪರಿಣಾಮ, ರಿಕ್ಷಾ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ರಿಕ್ಷಾ ಮೇಲೆ ಹರಿದು ಹೋಗಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಭಾರತ-ನ್ಯೂಜಿಲ್ಯಾಂಡ್ ಏಕದಿನ ಕ್ರಿಕೆಟ್ ಸರಣಿ ಮುಂದೂಡಿಕೆ: ಕಾರಣ?
ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಪಾರ್ವತಿಭಾಯ್ (60), ಸಂತ್ರಾ ಬಾಯ್ (45), ಮೋಹರ್ ಸಿಂಗ್(50), ಪ್ರಭುಲಾಲ್ (45) ಹಾಗೂ ಪನ್ನಾಲಾಲ್ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಎಲ್ಲರೂ ರಾಜಘಡದ ನಿವಾಸಿಗಳೆಂದು ಎಂದು ವರದಿಯಾಗಿದೆ.