ಕೋಲ್ಕತ್ತಾ (ಪಶ್ಚಿಮ ಬಂಗಾಳ): ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇಮಕ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ, ಪಕ್ಷದಲ್ಲಿ ಕೇವಲ ಒಂದು ಹುದ್ದೆಯನ್ನು ಅಲಂಕರಿಸಲು ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಮತ್ತು ಕೋರ್ ಕಮಿಟಿ ಕೂಡ ಇದಕ್ಕೆ ಒಪ್ಪಿಗೆ ನೀಡಿದೆ.
ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನಾಮ ನಿರ್ದೇಶನ ಮಾಡಿದ್ದಾರೆ ಎಂದು ಚಟರ್ಜಿ ಹೇಳಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಫತ್ವಾ : ಸ್ಥಳೀಯ ಟಿಎಂಸಿ ನಾಯಕರ ವಿರುದ್ಧ ಆರೋಪ
ಈಗ ಸುಬ್ರತಾ ಬಕ್ಷಿ ಅವರ ಬದಲಿಗೆ ಅಭಿಷೇಕ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನೊಂದೆಡೆಗೆ ಟಿಎಂಸಿ ಮುಖಂಡ ಸಯೋನಿ ಘೋಷ್ ಅವರನ್ನು ಯುವ ವಿಭಾಗದ ಅಧ್ಯಕ್ಷರನ್ನಾಗಿ ಮಾಡಲಾಗಿದೆ.