ETV Bharat / bharat

ಕ್ರೀಡಾಂಗಣದಲ್ಲಿ ಸೇನಾ ಆಕಾಂಕ್ಷಿಗಳ ನಡುವೆ ಹೊಡೆದಾಟ, ಗುಂಡಿನ ದಾಳಿ ಶಂಕೆ: ವಿಡಿಯೋ ವೈರಲ್​ - ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೇನಾ ಆಕಾಂಕ್ಷಿ ಯುವಕರ ಮಧ್ಯೆ ನಡೆದ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

mp-army-aspirants-clash-during-training-in-morena-stadium
ಕ್ರೀಡಾಂಗಣದಲ್ಲಿ ಸೇನಾ ಆಕಾಂಕ್ಷಿಗಳ ನಡುವೆ ಹೊಡೆದಾಟ, ಗುಂಡಿನ ದಾಳಿ ಶಂಕೆ: ವಿಡಿಯೋ ವೈರಲ್
author img

By

Published : Sep 6, 2022, 8:43 PM IST

Updated : Sep 6, 2022, 10:03 PM IST

ಮೊರೆನಾ (ಮಧ್ಯಪ್ರದೇಶ): ಸೇನಾ ನೇಮಕಾತಿಗೆ ಸಿದ್ಧತೆ ನಡೆಸುತ್ತಿದ್ದ ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೊರೆನಾ ಕ್ರೀಡಾಂಗಣದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಸುಮಾರು 20ಕ್ಕೂ ಹೆಚ್ಚು ಜನ ಸೇರಿಕೊಂಡು ಹಲ್ಲೆ ಮಾಡಲಾಗಿದೆ. ಈ ವೇಳೆ, ಗುಂಡಿನ ದಾಳಿಯೂ ನಡೆದಿದೆ ಎನ್ನಲಾಗಿದೆ. ಸದ್ಯ ಗಲಾಟೆಯ ವಿಡಿಯೋ ವೈರಲ್​ ಆಗಿದೆ.

ಇಲ್ಲಿನ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಈ ಗಲಾಟೆ ನಡೆದಿದೆ. ಇದರಲ್ಲಿ ನಾಲ್ವರು ಗಾಯಗೊಂಡಿದ್ದು, ಇಬ್ಬರು ಗಾಯಾಳುಗಳನ್ನು ಶಿವನಗರದ ನಿವಾಸಿ ದೀಪಕ್ ಕಂಶನ ಮತ್ತು ನಗರದ ಸಿದ್ಧನಗರದ ರಾಮನ್ ಕಂಶಣ ಎಂದು ಗುರುತಿಸಲಾಗಿದೆ.

ಕ್ರೀಡಾಂಗಣದಲ್ಲಿ ಸೇನಾ ಆಕಾಂಕ್ಷಿಗಳ ನಡುವೆ ಹೊಡೆದಾಟ, ಗುಂಡಿನ ದಾಳಿ ಶಂಕೆ: ವಿಡಿಯೋ ವೈರಲ್

ಸೇನಾ ಆಕಾಂಕ್ಷಿಗಳಾಗಿದ್ದ ಯುವಕರು ಕ್ರೀಡಾಂಗಣದಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದರು. ಈ ವೇಳೆ, ರನ್ನಿಂಗ್ ಟ್ರ್ಯಾಕ್‌ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಇದು ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ, ದೊಣ್ಣೆಗಳಿಂದ ಹೊಡೆದಾಟ ನಡೆಸಲಾಗಿದೆ. ಈ ಘಟನೆಯ ವಿಷಯ ತಿಳಿದು ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿದ್ದಾರೆ.

ಆದರೆ, ಈ ಘಟನೆ ನಿಖರವಾದ ಕಾರಣ ಗೊತ್ತಾಗಿಲ್ಲ. ನಾವು ನೀರು ಕುಡಿಯಲು ಹೋಗುತ್ತಿದ್ದಾಗ ಏಕಾಏಕಿ ನಮ್ಮ ಮೇಲೆ ದಾಳಿ ಮಾಡಲಾಯಿತು ಎಂದು ಗಾಯಾಳು ಯುವಕರು ತಿಳಿಸಿದ್ದಾರೆ. ಸದ್ಯ ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು, ಒಬ್ಬರ ಮೃತದೇಹ ಪತ್ತೆ..

Last Updated : Sep 6, 2022, 10:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.