ETV Bharat / bharat

₹450 ಸಿಲಿಂಡರ್​ ಗ್ಯಾಸ್​, ಬಡ ಹೆಣ್ಣು ಮಕ್ಕಳಿಗೆ ಶಿಕ್ಷಣ ಉಚಿತ: ಮಧ್ಯಪ್ರದೇಶ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

ಮಧ್ಯಪ್ರದೇಶದಲ್ಲಿ ಬಿಜೆಪಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಅಧಿಕಾರಕ್ಕೆ ಬಂದರೆ 10 ಪ್ರಮುಖ ಭರವಸೆಗಳನ್ನು ಈಡೇರಿಸುವುದಾಗಿ ಪಕ್ಷ ಹೇಳಿದೆ.

ಮಧ್ಯಪ್ರದೇಶ ಚುನಾವಣಾ ಪ್ರಣಾಳಿಕೆ
ಮಧ್ಯಪ್ರದೇಶ ಚುನಾವಣಾ ಪ್ರಣಾಳಿಕೆ
author img

By ETV Bharat Karnataka Team

Published : Nov 11, 2023, 9:10 PM IST

ಭೋಪಾಲ್​ (ಮಧ್ಯಪ್ರದೇಶ): 450 ರೂಪಾಯಿಗೆ ಸಿಲಿಂಡರ್​ ಗ್ಯಾಸ್​​, ಬಡ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣ, ಗೋಧಿ, ಅಕ್ಕಿ ಎಂಎಸ್​ಪಿ ದರದಲ್ಲಿ ಖರೀದಿ.. ಇಂದು ಮಧ್ಯಪ್ರದೇಶದಲ್ಲಿ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಪ್ರಮುಖ ಭರವಸೆಗಳು.

  • एमपी की बहनों को "मोदी की गारंटी"

    उज्ज्वला और लाड़ली बहना योजना की लाभार्थियों को ₹450 में सिलेंडर मिलेगा। pic.twitter.com/oAd5qIiHWx

    — BJP Madhya Pradesh (@BJP4MP) November 11, 2023 " class="align-text-top noRightClick twitterSection" data=" ">

ನವೆಂಬರ್ 17 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಶನಿವಾರ ತನ್ನ ಭರವಸೆಗಳನ್ನು ಅನಾವರಣಗೊಳಿಸಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಉಜ್ವಲ ಯೋಜನೆಯ ಅಡಿ 450 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್‌, ಲಾಡ್ಲಿ ಬಹನಾ ಯೋಜನೆಯಡಿ ಬಡ ಕುಟುಂಬದ ಹೆಣ್ಣುಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಘೋಷಿಸಿತು.

ವೈದ್ಯಕೀಯ ಕಾಲೇಜು ಸ್ಥಾಪನೆ: ಪ್ರತಿ ಕ್ವಿಂಟಲ್‌ ಗೋಧಿಗೆ 2,700, ಮತ್ತು ಭತ್ತಕ್ಕೆ 3,100 ರೂ. ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ)ಯಲ್ಲಿ ಖರೀದಿ. ಪ್ರತಿ ಪರಿಶಿಷ್ಟ ಪಂಗಡದ (ಎಸ್‌ಟಿ) ಬ್ಲಾಕ್‌ಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದರೊಂದಿಗೆ ಏಕಲವ್ಯ ವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

ಇದಲ್ಲದೆ, ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ 12 ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ (ಏಮ್ಸ್​) ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ವಸತಿ ರಹಿತರಿಗಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾದರಿಯಲ್ಲಿ ಮುಖ್ಯಮಂತ್ರಿ ಜನ್ ಆವಾಸ್ ಯೋಜನೆ (ವಸತಿ ಯೋಜನೆ) ಪ್ರಾರಂಭಿಸಲಾಗುವುದು ಎಂದು ಆಶ್ವಾಸನೆ ನೀಡಿತು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಪೌಷ್ಟಿಕಾಂಶಯುಕ್ತ ಉಪಹಾರ, 6 ಹೊಸ ಎಕ್ಸ್‌ಪ್ರೆಸ್‌ವೇಗಳು ಮತ್ತು ಬುಡಕಟ್ಟು ಸಮುದಾಯಗಳ ಸಬಲೀಕರಣಕ್ಕಾಗಿ ಬಜೆಟ್​ನಲ್ಲಿ 3 ಲಕ್ಷ ಕೋಟಿ ರೂಪಾಯಿಗಳ ಅನುದಾನ ಮೀಸಲಿಡಲಾಗುವುದು ಎಂದು ಪ್ರಣಾಳಿಕೆ ಹೇಳಿದೆ.

  • आज भोपाल में मध्य प्रदेश विधानसभा चुनाव के लिए @BJP4MP के संकल्प पत्र का विमोचन किया। हमारा यह संकल्प पत्र विगत 20वर्षों में प्रदेश में हुए सर्वस्पर्शी विकास को नया आयाम देगा।

    महिला सशक्तिकरण, जनजातीय गौरव, शिक्षा व स्वास्थ्य, गरीब कल्याण, अधोसंरचना निर्माण आदि सभी क्षेत्रों… pic.twitter.com/0Z6kyGltB6

    — Jagat Prakash Nadda (@JPNadda) November 11, 2023 " class="align-text-top noRightClick twitterSection" data=" ">

ಚರ್ಚಿಸಿ ಸೂಕ್ತ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಅವರು, ಸಮಾಜದ ಎಲ್ಲ ವರ್ಗಗಳು ಮತ್ತು ಬುದ್ಧಿಜೀವಿಗಳಿಂದ ಚರ್ಚೆ ನಡೆಸಿ ಸಲಹೆಗಳನ್ನು ಪಡೆದು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಪ್ರಣಾಳಿಕೆಯು ಜನರ ಆಕಾಂಕ್ಷೆಗಳನ್ನು ಒಳಗೊಂಡಿದೆ. ಅದನ್ನು ಚರ್ಚಿಸಲು ವಿಭಾಗೀಯ ಮಟ್ಟದಲ್ಲಿ ಸಮಾವೇಶಗಳನ್ನು ಆಯೋಜಿಸಲಾಗಿತ್ತು ಎಂದು ಹೇಳಿದರು.

ಪಕ್ಷ ನಡೆಸಿದ 11,000 ಕಿಮೀ ಉದ್ದದ 'ಜನಾಶೀರ್ವಾದ ಯಾತ್ರೆ'ಯಲ್ಲಿ ಜನರು ತಮ್ಮ ಅಭಿಪ್ರಾಯ ತಿಳಿಸಲು ಬಾಕ್ಸ್‌ಗಳನ್ನು ಇರಿಸಲಾಗಿತ್ತು. ಇದರಲ್ಲಿ 7 ಲಕ್ಷ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ ಜನರು ತಮಗೆ ಬೇಕಾದ ಅಗತ್ಯಗಳನ್ನು ನಮೂದಿಸಿದ್ದರು. ಅದರಲ್ಲಿನ ಅಂಶಗಳನ್ನು ಹೆಕ್ಕಿ ಸಂಶೋಧನೆ ನಡೆಸಿ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಎಂದು ಮಾಹಿತಿ ನೀಡಿದರು.

230 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 17 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡಕ್ಕೂ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವ ಗುರಿ ಹೊಂದಿದೆ.

ಇದನ್ನೂ ಓದಿ: ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುವೆ: ಸಂಸದ ಶ್ರೀನಿವಾಸ್ ಪ್ರಸಾದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.