ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಮತ್ತೋರ್ವ ಕಾಂಗ್ರೆಸ್ ಶಾಸಕ ಇದೀಗ ಭಾರತೀಯ ಜನತಾ ಪಾರ್ಟಿ ಸೇರಿದ್ದು, ಈ ಮೂಲಕ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 27 ಕೈ ಶಾಸಕರು ಕಮಲ ಮುಡಿದಂತೆ ಆಗಿದೆ.
ಬರ್ವಾಹಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಚಿನ್ ಬಿರ್ಲಾ ಇದೀಗ ಬಿಜೆಪಿ ಸೇರಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಒಟ್ಟು 22 ಶಾಸಕರು ಕಾಂಗ್ರೆಸ್ನಿಂದ ಬಿಜೆಪಿ ಸೇರಿದ್ದರಿಂದ ಅಲ್ಲಿನ ಕಮಲ್ನಾಥ್ ಸರ್ಕಾರ ಪತನಗೊಂಡಿತು. ಇದರ ಬೆನ್ನಲ್ಲೇ ಒಟ್ಟು ಐವರು ಶಾಸಕರು ಕಮಲ ಮುಡಿದಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಮ್ಮುಖದಲ್ಲೇ ಸಚಿನ್ ಬಿರ್ಲಾ ಬಿಜೆಪಿ ಸೇರಿದ್ದಾರೆ. ವಿಶೇಷವೆಂದರೆ ಖಾಂಡ್ವಾ-ಬುರ್ಹಾನ್ಪುರ್ ಲೋಕಸಭೆ ಕ್ಷೇತ್ರ ಹಾಗೂ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಬೆನ್ನಲ್ಲೇ ಈ ಬೆಳವಣಿಗೆ ಕಂಡು ಬಂದಿದೆ.
ಇದನ್ನೂ ಓದಿರಿ: ರೋಹಿತ್ ಅವರನ್ನ ಕೈಬಿಡುತ್ತೀರಾ? ಪಾಕ್ ಪತ್ರಕರ್ತನ ಪ್ರಶ್ನೆಗೆ ಈ ರೀತಿ ತಿರುಗೇಟು ನೀಡಿದ ಕೊಹ್ಲಿ!
ಕಮಲ ಸೇರಿದ ಬಳಿಕ ಕಮಲ್ನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿನ್, ಅವರನ್ನ ಭೇಟಿಯಾಗಲು ಪ್ರಯತ್ನಿಸಿದಾಗಲೆಲ್ಲಾ ಸಮಯವಿಲ್ಲ ಎಂದು ಹೇಳಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ, ಒಪ್ಪಂದ ಮಾಡಿಕೊಳ್ಳುವ ಮೂಲಕ ಬಿಜೆಪಿ ಮತ್ತೊಮ್ಮೆ ಪ್ರಜಾಪ್ರಭುತ್ವದಕ್ಕೆ ಕಳಂಕ ತಂದಿದೆ ಎಂದಿದ್ದಾರೆ.