ETV Bharat / bharat

ಪ್ರಿಯಕರನ ಮನೆಯಲ್ಲಿ ಸಿಕ್ಕಿಬಿದ್ದ ಮಹಿಳೆ.. ಭುಜದ ಮೇಲೆ ಗಂಡನ ಕೂರಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು!

author img

By

Published : Jul 4, 2022, 3:59 PM IST

ಪ್ರಿಯಕರನ ಮನೆಯಲ್ಲಿ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಅರೆಬೆತ್ತಲೆ ಮಾಡಿ, ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದರ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ.

Brutality with Tribal Woman
Brutality with Tribal Woman

ದೇವಾಸ್​​(ಮಧ್ಯಪ್ರದೇಶ): ಮಧ್ಯಪ್ರದೇಶದ ದೇವಾಸ್​ ಎಂಬಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬರು ಪ್ರಿಯಕರನ ಮನೆಯಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು, ಈ ವೇಳೆ, ಅವರ ಭುಜದ ಮೇಲೆ ಗಂಡನ ಕೂರಿಸಿ, ಮೆರವಣಿಗೆ ಮಾಡಿದ್ದಾರೆ. ಇದರ ವಿಡಿಯೋ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ.

ದೇವಾಸ್ ಜಿಲ್ಲೆಯ ಬುಡಕಟ್ಟು ಪ್ರದೇಶವಾದ ಬೋರ್ಪದವ್​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬುಡಕಟ್ಟು ಮಹಿಳೆ ಗ್ರಾಮದ ವ್ಯಕ್ತಿ ಜೊತೆ ಪ್ರೇಮ ಸಂಬಂಧ ಹೊಂದಿದ್ದರು. ಜೂನ್​ 24ರಂದು ಮನೆಯಿಂದ ಹೊರಗಡೆ ಹೋಗಿದ್ದಾರೆ. ಮನೆಗೆ ವಾಪಸ್ ಬಾರದ ಕಾರಣ ಉದಯನಗರ ಪೊಲೀಸ್ ಠಾಣೆಯಲ್ಲಿ ಆಕೆಯ ಗಂಡ ನಾಪತ್ತೆ ಪ್ರಕರಣ ದಾಖಲು ಮಾಡಿದ್ದರು. ಗ್ರಾಮಸ್ಥರೆಲ್ಲರೂ ಸೇರಿ ಹುಡುಕಾಟ ನಡೆಸಿದಾಗ ಪ್ರಿಯಕರನ ಮನೆಯಲ್ಲಿ ಸಿಕ್ಕಿಬಿದ್ದಿದ್ದಾಳೆ.

ಬುಡಕಟ್ಟು ಮಹಿಳೆಗೆ ಗ್ರಾಮಸ್ಥರಿಂದ ಚಿತ್ರಹಿಂಸೆ

ಇದನ್ನೂ ಓದಿ: ಮರು ಮದುವೆಗೆ ಸಿದ್ಧರಾದ ಟೀನಾ ದಾಬಿ ಮಾಜಿ ಪತಿ.. ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ UPSC ಟಾಪರ್​​

ಪ್ರಿಯಕರನಿಗೆ ಚಪ್ಪಲಿ ಹಾರ ಹಾಕಲಾಗಿದ್ದು, ಈ ವೇಳೆ, ಇಬ್ಬರ ಮೇಲೆ ಹಲ್ಲೆ ಸಹ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಿಯಕರ ದೂರು ದಾಖಲು ಮಾಡಿದ್ದು, ಇಲ್ಲಿಯವರೆಗೆ 9 ಜನರ ಬಂಧನ ಮಾಡಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬುಡಕಟ್ಟು ಮಹಿಳೆ ಪ್ರಿಯಕರನ ಮನೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಗ್ರಾಮಸ್ಥರೆಲ್ಲರೂ ಸೇರಿ, ಚಾರಿತ್ರ್ಯಹೀನಳೆಂದು ಆರೋಪ ಮಾಡಿದ್ದಾರೆ. ಜೊತೆಗೆ ಅರೆಬೆತ್ತಲೆ ಮಾಡಿ, ಅವರ ಕೊರಳಲ್ಲಿ ಚಪ್ಪಲಿ ಹಾರ ಹಾಕಿದ್ದಾರೆ. ಇಷ್ಟಕ್ಕೆ ತೃಪ್ತರಾಗದ ಜನರು, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಮಹಿಳೆಯ ರಕ್ಷಣೆಗೆ ಯಾರು ಸಹ ಮುಂದೆ ಬಂದಿಲ್ಲ ಎಂದಿದ್ದಾರೆ. ಮಹಿಳೆಯ ಪ್ರಿಯಕರ ಹರಿಸಿಂಗ್ ನೀಡಿರುವ ದೂರಿನ ಮೇರೆಗೆ ಉದಯನಗರ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಇಲ್ಲಿಯವರೆಗೆ 9 ಜನರ ಬಂಧನ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.