ಮಧ್ಯಪ್ರದೇಶ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ಲಾಕ್‌ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಮಧ್ಯಪ್ರದೇಶ ಸರ್ಕಾರ ಕೈಗೊಂಡಿದೆ.
ಮುಂದಿನ ದಿನಗಳಲ್ಲಿ ಸೋಂಕು ಪ್ರಸರಣ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ನಾಳೆ(ಶುಕ್ರವಾರ) ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್ ಜಾರಿ ಮಾಡಲಾಗಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದು, ನಗರ ಪ್ರದೇಶದಲ್ಲಿ ಕಂಟೈನ್‌ಮೆಂಟ್ ಝೋನ್ ಮಾಡಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.