ETV Bharat / bharat

ಮಧ್ಯಪ್ರದೇಶ ಖಾರ್ಗೋನ್​ ಹಿಂಸಾಚಾರ; ದಿಗ್ವಿಜಯ್ ವಿರುದ್ಧ ಪ್ರಕರಣ ದಾಖಲು

author img

By

Published : Apr 12, 2022, 9:24 PM IST

ಮಧ್ಯಪ್ರದೇಶದ ಖಾರ್ಗಾಂವ್​​ನಲ್ಲಿ ನಡೆದ ಕೋಮುಗಲಭೆ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್​ ಧಾರ್ಮಿಕ ವೈಷಮ್ಯ ಉಂಟು ಮಾಡುವ ಟ್ವೀಟ್ ಮಾಡಿದ್ದು, ಈ ವಿಚಾರವಾಗಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

legal action against Digvijaya
legal action against Digvijaya

ಭೋಪಾಲ್​(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ರಾಮನವಮಿ ಸಂದರ್ಭದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಹಿರಿಯ ಮುಖಂಡ ದಿಗ್ವಜಯ್​ ಸಿಂಗ್​ ವಿರುದ್ಧ ಪ್ರಕರಣ ದಾಖಲಾಗಿದೆ. ಧಾರ್ಮಿಕ ವೈಷಮ್ಯ ಉಂಟಾಗುವ ರೀತಿಯಲ್ಲಿ ಟ್ವೀಟ್ ಮಾಡಿದ್ದಕ್ಕಾಗಿ ಅವರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಪ್ರಕರಣ ದಾಖಲು ಮಾಡಿದೆ.

ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಖಾರ್ಗೋನ್​ ಪ್ರದೇಶದಲ್ಲಿ ಹಿಂಸಾಚಾರ ನಡೆದಿದ್ದು, ಇದರ ಬೆನ್ನಲ್ಲೇ ಕೆಲ ಯುವಕರು ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸುತ್ತಿರುವ ವಿಡಿಯೋ ತುಣಕೊಂದನ್ನು ದಿಗ್ವಿಜಯ್ ಸಿಂಗ್​ ಟ್ವೀಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣ ಮತ್ತಷ್ಟು ವೈಷಮ್ಯ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಈ ರೀತಿಯ ಟ್ವೀಟ್ ಮಾಡಿದ್ದಾರೆಂದು ಅರೋಪ ಮಾಡಿದೆ.

ಇದನ್ನೂ ಓದಿ: ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ: ವಿದ್ಯಾರ್ಥಿಗಳ ಪುಂಡಾಟಕ್ಕೆ ಕಿಟಕಿ ಗಾಜು ಪುಡಿಪುಡಿ

ಏನಿದು ಪ್ರಕರಣ?: ಮಧ್ಯಪ್ರದೇಶದ ಖರ್ಗೋನ್ ನಗರದಲ್ಲಿ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ವೇಳೆ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದನು. ಪರಿಣಾಮ ಸಿಆರ್​ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಗಲಭೆ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.