ETV Bharat / bharat

ಜ್ಯೂಸ್​ ಕುಡಿಯೋದಕ್ಕಾಗಿ ಕೊರೊನಾ ರೋಗಿಯಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲೇ ನಿಲ್ಲಿಸಿದ ಸಿಬ್ಬಂದಿ!! - ಜ್ಯೂಸ್​ ಕುಡಿಯಲು ರಸ್ತೆಯಲ್ಲಿ ಆಂಬ್ಯುಲೆನ್ಸ್​ ನಿಲ್ಲಿಸಿದ ಸಿಬ್ಬಂದಿ

ಆಸ್ಪತ್ರೆಗೆ ಕೊರೊನಾ ಸೋಂಕಿತ ವ್ಯಕ್ತಿ ಕರೆದುಕೊಂಡು ಹೋಗುತ್ತಿದ್ದ ವೇಳೆ ನಡುರಸ್ತೆಯಲ್ಲಿ ಜ್ಯೂಸ್​ ಕುಡಿಯಲು ಆ್ಯಂಬುಲೆನ್ಸ್​ ನಿಲ್ಲಿಸಿರುವ ಘಟನೆ ನಡೆದಿದೆ.

Health workers stop ambulance with corona patient

author img

By

Published : Apr 9, 2021, 9:59 PM IST

ಇಂದೋರ್​(ಮಧ್ಯಪ್ರದೇಶ): ಮಹಾಮಾರಿ ಕೊರೊನಾ ವೈರಸ್​ 2ನೇ ಅಲೆ ದೇಶದಲ್ಲಿ ಜೋರಾಗಿದ್ದು, ಈಗಾಗಲೇ ನಿತ್ಯ ಲಕ್ಷಾಂತರ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದರ ಮಧ್ಯೆ ಕೆಲ ಆರೋಗ್ಯ ಸಿಬ್ಬಂದಿ ಮಾಡುತ್ತಿರುವ ಎಡವಟ್ಟು ಇಡೀ ಆರೋಗ್ಯ ಇಲಾಖೆ ತಲೆ ತಗ್ಗಿಸುವಂತೆ ಮಾಡುತ್ತಿವೆ.

ಆ್ಯಂಬುಲೆನ್ಸ್​ನಲ್ಲಿ ಕೋವಿಡ್ ರೋಗಿ, ಜ್ಯೂಸ್ ಕುಡಿಯಲು ರಸ್ತೆ ಮಧ್ಯೆ ವಾಹನ ನಿಲ್ಲಿಸಿದ ಸಿಬ್ಬಂದಿ

ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗ್ತಿದೆ. ಕೊರೊನಾ ರೋಗಿ ಹೊತ್ತುಕೊಂಡು ಆ್ಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಕಾರ್ಯಕರ್ತರು ರಸ್ತೆ ಮಧ್ಯೆ ಕಬ್ಬಿನ ಜ್ಯೂಸ್​ ಕುಡಿಯಲು ನಿಲ್ಲಿಸಿದ್ದಾರೆ.

ಈ ವೇಳೆ ಆ್ಯಂಬುಲೆನ್ಸ್​​ನಲ್ಲಿ ಕೇವಲ ಕೊರೊನಾ ರೋಗಿ ಮಾತ್ರ ಕಾಣುತ್ತಿದ್ದಾನೆ. ವಿಡಿಯೋ ವೈರಲ್​ ಆಗ್ತಿದ್ದಂತೆ ಆರೋಗ್ಯ ಇಲಾಖೆಯಲ್ಲಿ ಕೋಲಾಹಲ ಉಂಟಾಗಿದೆ.

ಶಹ್ದೋಲ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ರೀತಿಯಾದರೆ ಕೊರೊನಾ ಎಲ್ಲಿ ನಿಲ್ಲುತ್ತದೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆ್ಯಂಬುಲೆನ್ಸ್​​ನಲ್ಲಿರುವ ಆರೋಗ್ಯ ಸಿಬ್ಬಂದಿ ಪಿಪಿಇ ಕಿಟ್​​ನಲ್ಲಿದ್ದು, ವ್ಯಕ್ತಿಯೋರ್ವ ಸಿಬ್ಬಂದಿಯ ಪ್ರಶ್ನೆ ಸಹ ಮಾಡಿದ್ದಾರೆ. ಆದರೆ ಇದಕ್ಕೆ ಆರೋಗ್ಯ ಸಿಬ್ಬಂದಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವೈದ್ಯಾಧಿಕಾರಿ ಪ್ರಕರಣದ ಬಗ್ಗೆ ಗೊತ್ತಿಲ್ಲ. ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.